ಪಶುಸಂಗೋಪನಾ ಇಲಾಖೆಯಡಿ ಕಾರ್ಯನಿರ್ವಹಿಸುವ ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮಾಂತರ ಭಾಗದಲ್ಲಿ ಪಶು ಸಖಿಯರ ಅವರ ಸೇವೆ ಶ್ಲಾಘನೀಯ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕ ಒಕ್ಕೂಟ ಲಾಭದಲ್ಲಿದೆ. ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್‌ಗೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪಶುಸಖಿಯರನ್ನು ಕೇಂದ್ರ ಸರ್ಕಾರದಿಂದ ನೇಮಕ ಮಾಡಲಾಗಿದ್ದು, ಅವರು ಇಲಾಖೆ ಮತ್ತು ರೈತರ ನಡುವೆ ಕೊಂಡಿಯಾಗಿ ಉತ್ತಮ ರೀತಿಯಲ್ಲಿ ಜವಾಬ್ದಾರಿಯುತವಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಶುಸಖಿಯರು ಗ್ರಾಮೀಣ ಪ್ರದೇಶದಲ್ಲಿ ರೈತರ ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮತ್ತು ಜಾನುವಾರ ನಿರ್ವಹಣಾ ಸೇವೆಗಳನ್ನು ಮತ್ತು ಮಾಹಿತಿಯನ್ನು ನೀಡುತ್ತಿದ್ದಾರೆ. ಪಶುಸಖಿಯರಿಗೆ ಕಡಿಮೆ ಗೌರವಧನ ನೀಡಲಾಗುತ್ತಿದ್ದು , ಅವರಿಗೆ ಕನಿಷ್ಠ 5000 ರೂ ಗೌರವಧನ ಹೆಚ್ಚಳ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತದೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ಪಶು ಸಖಿಯರಿಗೆ ನೀಡುವ ಗೌರವ ಧನದ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ 3.40 ಲೀಟರ್ ಲಕ್ಷ ಹಾಲು ಉತ್ಪಾದನೆ ಮಾಡುತ್ತಿದ್ದು, ಹೆಚ್ಚುವರಿಯಾಗಿ 1.60 ಲೀ. ಲಕ್ಷ ಹಾಲನ್ನು ಇತರ ಜಿಲ್ಲೆಗಳಿಂದ ಆಮದು ಮಾಡುತ್ತಿದೆ. ಹಾಲು ಉತ್ಪಾದನೆಗಿಂತಲೂ ಖರ್ಚು ಮಾಡಿ ಉತ್ತಮ ಲಾಭಗಳಿಸಿದೆ. ಮೈಸೂರಿನಲ್ಲಿ ಶೇಕಡಾ 40 ರಷ್ಟು ಹಾಲು ಖರ್ಚಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ ಉತ್ತಮ ನಿರ್ವಹಣೆ ಮಾಡುತ್ತಿದೆ ಎಂದು ಸಚಿವರು ಹೇಳಿದರು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…