ಬೆಳೆಹಾನಿ ನಷ್ಟ ಪರಿಹಾರ ಹೆಚ್ಚಿಸಿ | ಕೇಂದ್ರಕ್ಕೆ ಮನವಿ ಮಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ

June 13, 2023
5:29 PM

ಹೆಚ್ಚಾಗಿ ಮಳೆ ಬಂದ್ರೆ ಅತಿವೃಷ್ಠಿ, ಮಳೆ ಬಾರದೆ ಹೋದ್ರೆ ಅನಾವೃಷ್ಠಿ. ರೈತನಿಗೆ ಒಂದಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ. ರೈತ ನಷ್ಟ ಅನುಭವಿಸಿದ್ದಲ್ಲಿ ಸರ್ಕಾರಗಳು ಬೆನ್ನೆಲುಬಾಗಿ ನಿಲ್ಲಬೇಕು. ಅದು ಅಷ್ಟಕ್ಕಷ್ಟೆ. ಬಂದ್ರೆ ಬಂತು.. ಇಲ್ಲ ಅಂದರೆ ಇಲ್ಲಾ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಬಾರಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ.

ಬಿಪೊರ್ ಜಾಯ್  ಚಂಡಮಾರುತದ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನಡೆಸಿದ ಸಭೆಯ ನಂತರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳೆಹಾನಿ, ಮಳೆ ಆಶ್ರಿತ ಭೂಮಿಯಲ್ಲಿ ಬೆಳೆಹಾನಿ, ನೀರಾವರಿ ಭೂಮಿ ತೋಟಗಾರಿಕೆ ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿವುಂತೆ ಮನವಿ ಮಾಡಿದ್ದಾಗಿ ತಿಳಿಸಿದರು.

ಸಭೆಯಲ್ಲಿ ಕರ್ನಾಟಕದ ಪರವಾಗಿ ಮೂರು ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಮಳೆ ಹಾನಿ, ಬೆಳೆ ಪರಿಹಾರ ಮೊತ್ತವೂ ಕಡಿಮೆ ಇದೆ. ರಾಜ್ಯ ಸರ್ಕಾರ ಕೈಯಿಂದ ಹಣ ಹಾಕುತ್ತಿದೆ, ಇದು ಹೊರೆಯಾಗುತ್ತಿದೆ. ಹೀಗಾಗಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದೇನೆ. ಕರ್ನಾಟಕದ ಎಸ್‌ಡಿಆರ್‌ಎಫ್​​ಗೆ ಈಗಾಗಲೇ ಅನುದಾನ ಕಡಿಮೆ ಬರುತ್ತಿದೆ. ಈ ಹಿನ್ನೆಲೆ ಪರಿಷ್ಕರಣೆಯಾಗಬೇಕು ಎಂದು ಒತ್ತಾಯಿಸಿದ್ದೇನೆ ಎಂದು ಹೇಳಿದರು.

ಪ್ರಕೃತಿ ವಿಕೋಪಗಳ ಬಗ್ಗೆ ಹೆಚ್ಚು ಮುಂಜಾಗ್ರತೆ ವಹಿಸಬೇಕು. ಈ ಹಿನ್ನಲೆ ಚರ್ಚೆ ಮಾಡಲು ಇಂದು ಸಭೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೆಲವು ಮಾನದಂಡಗಳನ್ನು ಪಾಲಿಸಲು ಸೂಚಿಸಿದೆ. ಅಕ್ಟೋಬರ್​ನಲ್ಲಿ ಕೇಂದ್ರ ಸರ್ಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತ ಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು. ಇದರಿಂದ ರೈತರು ಮತ್ತು ಸರ್ಕಾರಕ್ಕೆ ನಷ್ಟವಾಗುತ್ತಿದ್ದು ವಿಮಾ ಕಂಪನಿಗಳಿಗೆ ಲಾಭವಾಗುತ್ತಿದೆ ಎಂದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ
April 13, 2026
10:45 PM
by: ಮಿರರ್‌ ಡೆಸ್ಕ್
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ
April 13, 2026
10:28 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror