ಹೆಚ್ಚಾಗಿ ಮಳೆ ಬಂದ್ರೆ ಅತಿವೃಷ್ಠಿ, ಮಳೆ ಬಾರದೆ ಹೋದ್ರೆ ಅನಾವೃಷ್ಠಿ. ರೈತನಿಗೆ ಒಂದಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ. ರೈತ ನಷ್ಟ ಅನುಭವಿಸಿದ್ದಲ್ಲಿ ಸರ್ಕಾರಗಳು ಬೆನ್ನೆಲುಬಾಗಿ ನಿಲ್ಲಬೇಕು. ಅದು ಅಷ್ಟಕ್ಕಷ್ಟೆ. ಬಂದ್ರೆ ಬಂತು.. ಇಲ್ಲ ಅಂದರೆ ಇಲ್ಲಾ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಬಾರಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ.
ಬಿಪೊರ್ ಜಾಯ್ ಚಂಡಮಾರುತದ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನಡೆಸಿದ ಸಭೆಯ ನಂತರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳೆಹಾನಿ, ಮಳೆ ಆಶ್ರಿತ ಭೂಮಿಯಲ್ಲಿ ಬೆಳೆಹಾನಿ, ನೀರಾವರಿ ಭೂಮಿ ತೋಟಗಾರಿಕೆ ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿವುಂತೆ ಮನವಿ ಮಾಡಿದ್ದಾಗಿ ತಿಳಿಸಿದರು.
ಸಭೆಯಲ್ಲಿ ಕರ್ನಾಟಕದ ಪರವಾಗಿ ಮೂರು ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಮಳೆ ಹಾನಿ, ಬೆಳೆ ಪರಿಹಾರ ಮೊತ್ತವೂ ಕಡಿಮೆ ಇದೆ. ರಾಜ್ಯ ಸರ್ಕಾರ ಕೈಯಿಂದ ಹಣ ಹಾಕುತ್ತಿದೆ, ಇದು ಹೊರೆಯಾಗುತ್ತಿದೆ. ಹೀಗಾಗಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದೇನೆ. ಕರ್ನಾಟಕದ ಎಸ್ಡಿಆರ್ಎಫ್ಗೆ ಈಗಾಗಲೇ ಅನುದಾನ ಕಡಿಮೆ ಬರುತ್ತಿದೆ. ಈ ಹಿನ್ನೆಲೆ ಪರಿಷ್ಕರಣೆಯಾಗಬೇಕು ಎಂದು ಒತ್ತಾಯಿಸಿದ್ದೇನೆ ಎಂದು ಹೇಳಿದರು.
ಪ್ರಕೃತಿ ವಿಕೋಪಗಳ ಬಗ್ಗೆ ಹೆಚ್ಚು ಮುಂಜಾಗ್ರತೆ ವಹಿಸಬೇಕು. ಈ ಹಿನ್ನಲೆ ಚರ್ಚೆ ಮಾಡಲು ಇಂದು ಸಭೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೆಲವು ಮಾನದಂಡಗಳನ್ನು ಪಾಲಿಸಲು ಸೂಚಿಸಿದೆ. ಅಕ್ಟೋಬರ್ನಲ್ಲಿ ಕೇಂದ್ರ ಸರ್ಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತ ಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು. ಇದರಿಂದ ರೈತರು ಮತ್ತು ಸರ್ಕಾರಕ್ಕೆ ನಷ್ಟವಾಗುತ್ತಿದ್ದು ವಿಮಾ ಕಂಪನಿಗಳಿಗೆ ಲಾಭವಾಗುತ್ತಿದೆ ಎಂದರು.
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಂಭವನೀಯ ದಾಳಿಯ ಬಗ್ಗೆ…
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…