ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ ಯೋಜನೆಗಳ ಕುರಿತ ಪರಿಶೀಲನಾ ಸಭೆ ನಡೆಯಿತು.ಮೀನು ಸೇರಿದಂತೆ ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್, ಪ್ರಧಾನಿ ಅವರ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಆಳ ಸಮುದ್ರದ ಮೀನುಗಾರಿಕೆ, ಮತ್ಸ್ಯೋದ್ಯಮ ಅಭಿವೃದ್ಧಿ ಯೋಜನೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಧಾನಿ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಬಳಿಕ ಪ್ರಧಾನಿ, ಮೀನು ಸೇರಿದಂತೆ ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಮೀನುಗಾರಿಕೆ ಸಚಿವಾಲಯದಿಂದ ಕಳೆದ ತಿಂಗಳು 28ರಂದು 255 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಪ್ರಕಟಿಸಿದ ನಂತರ ಈ ಮಹತ್ವದ ಸಭೆ ನಡೆದಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…