Advertisement
MIRROR FOCUS

ಕೃಷಿ ಉತ್ಪಾದನೆ  ಹೆಚ್ಚಳ | ರೈತರ ಸಮಗ್ರ ವಿಕಾಸಕ್ಕೆ ಆದ್ಯತೆ

Share

2014ರಿಂದ 2024 ರ ಅವಧಿಯಲ್ಲಿ ದೇಶದ ಕೃಷಿ ಉತ್ಪಾದನೆ ಶೇಕಡ 44 ರಷ್ಟು ಭಾರಿ ಏರಿಕೆ ಕಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್  ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಅವರು, ಕೃಷಿ ಮತ್ತು ರೈತರ ಸಮಗ್ರ ವಿಕಾಸಕ್ಕಾಗಿ 6 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿ ಪರಿಕಲ್ಪನೆಗಳ ಅನುಸಾರ ಭಾರತ, ಎಲ್ಲ ವಲಯಗಳಲ್ಲಿ ಅತ್ಯಂತ ಸಮೃದ್ಧ, ವಿಕಸಿತ, ಶಕ್ತಿಶಾಲಿ ಮತ್ತು ಗೌರವಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದರು.  ಪಿಎಂ-ಕಿಸಾನ್ ಸಮ್ಮಾನ್ ಯೋಜನೆ ಸಣ್ಣ ರೈತರಿಗೆ ವರದಾನವಾಗಿದ್ದು, ಇದರಡಿ ಒಟ್ಟು 4 ಲಕ್ಷ 9 ಸಾವಿರ ಕೋಟಿ ರೂಪಾಯಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ರಸಗೊಬ್ಬರ ಸಹಾಯಧನವಾಗಿ ನೀಡಲಾಗಿದೆ. ಫಸಲ್ ಬಿಮಾ ಯೋಜನೆಯಡಿ 1 ಲಕ್ಷ 90 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು. ಪೌಷ್ಟಿಕ ಆಹಾರಧಾನ್ಯವಾದ ಬೇಳೆಕಾಳು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ತೊಗರಿ, ಉದ್ದಿನಬೇಳೆ, ಮಸೂರ್ ದಾಲ್ ಸೇರಿದಂತೆ ವಿವಿಧ ಬೇಳೆಕಾಳುಗಳ ಉತ್ಪಾದನೆಯನ್ನು ಬೆಂಬಲ ಬೆಲೆ ಮೂಲಕ ಶೇಕಡ 100ರಷ್ಟು ಖರೀದಿಸಲಾಗುತ್ತಿದೆ. ಬೇಳೆಕಾಳು ಮಿಷನ್ ಸ್ಥಾಪಿಸಲಾಗಿದ್ದು, ದೇಶೀಯ ಬೇಳೆಕಾಳು ಬೆಳೆಗಾರರ ಹಿತರಕ್ಷಣೆಗಾಗಿ ಆಮದು ಬೇಳೆಕಾಳುಗಳ ಮೇಲೆ ಸುಂಕ ವಿಧಿಸಲಾಗುತ್ತಿದೆ ಎಂದು ತಿಳಿಸಿದರು.  ಇತ್ತೀಚೆಗೆ ಕರ್ನಾಟಕದ ಸಂಸದರ ನಿಯೋಗ ತಮ್ಮನ್ನು ಭೇಟಿಯಾಗಿ ತೊಗರಿಬೇಳೆ ಖರೀದಿಗೆ ಬೇಡಿಕೆ ಸಲ್ಲಿಸಿದೆ. ಅಲ್ಲಿನ ಸರ್ಕಾರ ಮಂಡಿಸಿದ ಖರೀದಿ ಬೇಡಿಕೆಯನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

11 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

23 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

24 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

24 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago