Advertisement
ಪ್ರಮುಖ

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!

Share

ಅಡಿಕೆ ಬೆಲೆ ಏರಿಕೆಯ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸುದ್ದಿಯಾಗುತ್ತಿದೆ. ಭಾರತದಲ್ಲಿ ಅಡಿಕೆ ಕೊರತೆ ಇರುವುದರಿಂದ ಬೇಡಿಕೆ ಬರಲಿದೆ ಎಂದು ಮ್ಯಾನ್ಮಾರ್‌ ಸೇರಿದಂತೆ ಇತರ ದೇಶಗಳಲ್ಲಿ ಚರ್ಚೆ ಆರಂಭವಾಗಿದೆ. ಈ ವರ್ಷ ಅಡಿಕೆ ಪೂರೈಕೆ ಕಡಿಮೆಯಾಗಿರುವುದರಿಂದ, ವ್ಯಾಪಾರಿಗಳು  ಖರೀದಿಗಾಗಿ ಕಾಯುತ್ತಿದ್ದಾರೆ, ಭಾರತ, ಚೀನಾದತಂಹ ದೇಶಗಳಿಗೆ ಅಡಿಕೆ ಬೇಕಾಗಿದೆ ಎಂದು ಅಲ್ಲಿನ ಬೆಳೆಗಾರರಿಗೆ ಮಾಹಿತಿ ನೀಡಲಾಗಿದೆ.

ಚೀನಾ ಹಾಗೂ ಭಾರತದಲ್ಲಿ ಅಡಿಕೆ ಉತ್ಪಾದನೆಯ ಕೊರತೆ ಇರುವುದರಿಂದ ಅಡಿಕೆಗೆ ವಿದೇಶಗಳಿಂದ ಈಗ ಬೇಡಿಕೆ ವ್ಯಕ್ತವಾಗಿದ್ದು, ಈ ವರ್ಷ ಬೆಲೆ ಹೆಚ್ಚಾಗುವ ನಿರೀಕ್ಷೆಯಿದೆ. ಕಳೆದ ವರ್ಷ, ಸೀಮಿತ ಪೂರೈಕೆಯಿಂದಾಗಿ ಅಡಿಕೆ ಬೆಳೆಗಾರರಿಗೆ ನಷ್ಟವಾಗಿತ್ತು. ಈಗಾಗಲೇ ಚೀನಾ ಅಡಿಕೆಗೆ ಬೇಡಿಕೆಯನ್ನು ನೀಡಲು ಪ್ರಾರಂಭಿಸಿದೆ. ಹಿಂದಿನ ವರ್ಷದಂತೆ ಎಳೆಯ ಅಡಿಕೆಗಳನ್ನು ಹೆಚ್ಚಾಗಿ ಮಾರಾಟ ಮಾಡಿದರೆ ಈ ವರ್ಷವೂ ಬೆಲೆ ಏರಿಕೆಯಾಗುತ್ತಲೇ ಇರುತ್ತದೆ. ವರ್ಷವಿಡೀ ಅಡಿಕೆ ಲಭ್ಯವಿರುವುದಿಲ್ಲ, ಆದ್ದರಿಂದ ಈ ವರ್ಷ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವುದು ಮ್ಮಾನ್ಮಾರ್‌ ಬೆಳೆಗಾರರಿಗೆ ನೀಡಿರುವ ಮಾಹಿತಿ. ಹಿಂದಿನ ವರ್ಷಗಳಲ್ಲಿ ಎಳೆಯ ಅಡಿಕೆಗೆ ಚೀನಾದ ಬೇಡಿಕೆ ಹೆಚ್ಚಾದ ಕಾರಣ, ಈ ವರ್ಷ ಒಣಗಿದ ಅಡಿಕೆಯ ಬೆಲೆ ಹೆಚ್ಚಾಗಿದೆ. ಪ್ರಸ್ತುತ, ಸ್ಥಳೀಯ ಮಾರುಕಟ್ಟೆಯಲ್ಲಿ ಪೂರೈಕೆಗಿಂತ ಬೇಡಿಕೆ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತಕ್ಕೆ ಬಹುಪಾಲು ಅಡಿಕೆ ಕಳ್ಳಸಾಗಾಣಿಕೆಯ ಮೂಲಕವೇ ಸಾಗಾಟವಾಗುತ್ತದೆ. ಹೀಗಾಗಿ ಈ ಬಾರಿ ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಭಾರತದಲ್ಲಿ ಸೂಕ್ತ ಕ್ರಮವಾಗಬೇಕಿದೆ. ಅಸ್ಸಾಂ ಮೂಲಕ  ಅಡಿಕೆ ಕಳ್ಳ ಸಾಗಾಟವಾದರೆ, ವಿವಿಧ ಬಂದರುಗಳ ಮೂಲಕ ಒಣ ಹಣ್ಣು ಎಂದು ಉಲ್ಲೇಖಿಸಿ ಅಥವಾ ತಪ್ಪಾದ ಮಾಹಿತಿ ನೀಡಿ ಅಡಿಕೆ ಸಾಗಾಟವಾಗುತ್ತಿರುವುದಕ್ಕೆ ಈಗ ನಿಯಂತ್ರಣ ಅಗತ್ಯ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

19 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago