ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಬರಾಜು ಮಾಡುವ ಅಗತ್ಯ ಔಷಧಿಗಳ ಪಟ್ಟಿಯನ್ನು 250 ರಿಂದ ಒಂದು ಸಾವಿರಕ್ಕೆ ಏರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಎಲ್ಲಾ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಔಷಧಿ ಸರಬರಾಜು ಪ್ರಮಾಣ ಶೇಕಡ 80 ರಷ್ಟಿದ್ದು, ಇನ್ನು ಮೂರ್ನಾಲ್ಕು ತಿಂಗಳಲ್ಲಿ ಶೇಕಡ ನೂರರಷ್ಟು ಸರಬರಾಜಾಗಲಿದೆ. ಔಷಧಿ ವಿತರಣೆಯಲ್ಲಿ ಲೋಪವಾದರೆ ತಾಲೂಕು ಆರೋಗ್ಯಾಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel