ಇತ್ತೀಚೆಗೆ ನೂತನ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಉಚಿತ, ಬೆಲೆ ಏರಿಕೆ” ಎರಡೇ ಶಬ್ದಗಳು ಚಾಲ್ತಿಯಲ್ಲಿದೆ. ಒಂದೆಡೆ ಸರ್ಕಾರ ಉಚಿತ ಗ್ಯಾರಂಟಿಗಳನ್ನು ನೀಡುತ್ತಿದ್ರೆ, ಇನ್ನೊಂದೆಡೆ ಬೆಲೆ ಏರಿಕೆಯ ಕಾಣುತ್ತಿದೆ.ಇದೀಗ ವಿದ್ಯುತ್ ದರ ಹೆಚ್ಚಳದ ಕಾರಣ ಅಕ್ಕಿ ಬೆಲೆ #RicePrice ಹೆಚ್ಚಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.
ಅಕ್ಕಿ ಬೆಲೆ ಕೆಜಿಗೆ 5 ರೂ.ನಿಂದ 10 ರೂ.ವರೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯುತ್ ಬಿಲ್ ಹೆಚ್ಚಳದಿಂದಾಗಿ ಮಿಲ್ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ತಿಳಿಸಿದೆ.
ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳದಿಂದ ಕಂಗೆಟ್ಟಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ, ನಂದಿನ ಹಾಲಿನ ದರ ಹೆಚ್ಚಳದ ಬಗ್ಗೆಯೂ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಒಂದು ವೇಳೆ ಅಕ್ಕಿ ದರವೂ ಹೆಚ್ಚಾದರೆ ಮಧ್ಯಮ ವರ್ಗದವರಿಗೆ ತೀವ್ರ ಹೊಡೆತ ಬೀಳಲಿದೆ. ಒಂದೆಡೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ದಾರ ಕುಟುಂಬದವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಕ್ಕಿ ದರ ಏರಿಕೆಯ ಸುದ್ದಿ ಬಂದಿದೆ. ಒಂದು ವೇಳೆ ಅಕ್ಕಿ ಬೆಲೆ ಏರಿಕೆಯಾದರೆ ಇನ್ನೊಂದು ಚರ್ಚೆ ಆರಂಭವಾಗಲಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…