Advertisement
ಸುದ್ದಿಗಳು

#RicePrice | ಅಕ್ಕಿ ಬೆಲೆಯಲ್ಲೂ ಏರಿಕೆ | ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ |

Share

ಇತ್ತೀಚೆಗೆ ನೂತನ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಉಚಿತ, ಬೆಲೆ ಏರಿಕೆ” ಎರಡೇ ಶಬ್ದಗಳು ಚಾಲ್ತಿಯಲ್ಲಿದೆ. ಒಂದೆಡೆ ಸರ್ಕಾರ ಉಚಿತ ಗ್ಯಾರಂಟಿಗಳನ್ನು ನೀಡುತ್ತಿದ್ರೆ, ಇನ್ನೊಂದೆಡೆ ಬೆಲೆ ಏರಿಕೆಯ ಕಾಣುತ್ತಿದೆ.ಇದೀಗ ವಿದ್ಯುತ್ ದರ ಹೆಚ್ಚಳದ ಕಾರಣ ಅಕ್ಕಿ ಬೆಲೆ #RicePrice ಹೆಚ್ಚಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.

ಅಕ್ಕಿ ಬೆಲೆ ಕೆಜಿಗೆ 5 ರೂ.ನಿಂದ 10 ರೂ.ವರೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯುತ್ ಬಿಲ್ ಹೆಚ್ಚಳದಿಂದಾಗಿ ಮಿಲ್​​​ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ತಿಳಿಸಿದೆ.

ಪ್ರಸ್ತುತ ಒಂದು ಕೆಜಿ ಅಕ್ಕಿಗೆ‌ 45 ರೂ. ಇದೆ. ತೆರಿಗೆ, ಲೇಬರ್ ಖರ್ಚು, ವಿದ್ಯುತ್ ಬಿಲ್ ಏರಿಕೆ ಸಾಕಷ್ಡು ಹೊರೆಯಾಗುತ್ತಿದೆ. ಇದನ್ನ ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ರೈಸ್ ಮಿಲ್ಲರ್ಸ್ ಫೆಡರೇಷನ್ ಹೇಳಿದೆ. ಇದರೊಂದಿಗೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳದಿಂದ ಕಂಗೆಟ್ಟಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ, ನಂದಿನ ಹಾಲಿನ ದರ ಹೆಚ್ಚಳದ ಬಗ್ಗೆಯೂ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಒಂದು ವೇಳೆ ಅಕ್ಕಿ ದರವೂ ಹೆಚ್ಚಾದರೆ ಮಧ್ಯಮ ವರ್ಗದವರಿಗೆ ತೀವ್ರ ಹೊಡೆತ ಬೀಳಲಿದೆ. ಒಂದೆಡೆ  ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್​​​ದಾರ ಕುಟುಂಬದವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಕ್ಕಿ ದರ ಏರಿಕೆಯ ಸುದ್ದಿ ಬಂದಿದೆ. ಒಂದು ವೇಳೆ ಅಕ್ಕಿ ಬೆಲೆ ಏರಿಕೆಯಾದರೆ ಇನ್ನೊಂದು ಚರ್ಚೆ ಆರಂಭವಾಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

5 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

5 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

16 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

20 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

2 days ago