MIRROR FOCUS

ಕೇರಳದಲ್ಲಿ ಹೆಚ್ಚಿದ ಕೊರೊನಾ | ಕರ್ನಾಟಕದಲ್ಲಿ ಮಾರ್ಗಸೂಚಿ ಪ್ರಕಟ | ಮಂಡ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮತ್ತೆ ದೇಶದಲ್ಲಿ ಕೊರೋನಾ ಪ್ರಕರಣ(Corona Case) ಪತ್ತೆಯಾಗುತ್ತಿರುವುದು ಸಾರ್ವಜನಿಕರಲ್ಲಿ  ಆತಂಕಕ್ಕೆ ಕಾರಣವಾಗಿದೆ. ಕೇರಳದಲ್ಲಿ (Kerala) ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಹೊಸವರ್ಷ, ಕ್ರಿಸ್ ಮಸ್ ಹಾಗೂ ಚಳಿಗಾಲ ಗಮನದಲ್ಲಿಟ್ಟು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (Health and Family Welfare Department) ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಧ್ಯೆ ಮಂಡ್ಯದ(Mandya) ಮದ್ದೂರು ತಾಲೂಕಿನ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು (Corona Virus) ದೃಢಪಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

Advertisement
ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಜ್ವರದಿಂದಾಗಿ ಆಸ್ಪತ್ರೆಗೆ (Mandya Hospital) ತೆರಳಿದ್ದು, ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿರುವುದು ಗೊತ್ತಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಯ ಕುಟುಂಬಸ್ಥರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರೆಲ್ಲರಿಗೂ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿ ಮಂಗಳವಾರವೇ (ಇಂದು) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಮಾರ್ಗಸೂಚಿಯಲ್ಲಿ ಏನಿದೆ?
  • ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪುದೇಶಗಳಿಗೆ ತೆರಳಬೇಡಿ.
  • ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು.
  • ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲಿಸುವುದು.
  • ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ, ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪುದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕು.
  • ಅಂತರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

2 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

17 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

17 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

18 hours ago