ಈ ಬಾರಿಯ ಬೇಸಿಗೆ ಬಿಸಿ ಎಲ್ಲಾ ಕ್ಷೇತ್ರದ ಮೇಲೂ ಪರಿಣಾಮ ಬೀರುತ್ತಿದೆ. ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ತನ್ನ ಕೆಟ್ಟ ಪ್ರಭಾವ ಬೀರುತ್ತಿದೆ, ದೇಶಾದ್ಯಂತ ಬೇಸಿಗೆಯ ವಾತಾವರಣ(Summer) ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ವಿದ್ಯುತ್ ಬೇಡಿಕೆಯೂ ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು(Power demand) ಪೂರೈಸಲು ನೆರವಾಗುವ ನಿಟ್ಟಿನಲ್ಲಿ ಅನಿಲ ಆಧಾರಿತ ವಿದ್ಯುತ್ ಸ್ಥಾವರಗಳನ್ನು(GAS BASED POWER) ಕಾರ್ಯಗತಗೊಳಿಸಲು ಸರ್ಕಾರ(Govt) ನಿರ್ಧರಿಸಿದೆ ಎಂದು ವಿದ್ಯುತ್ ಸಚಿವಾಲಯ(Ministry of Power) ತಿಳಿಸಿದೆ.
“ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳಿಂದ ಗರಿಷ್ಠ ವಿದ್ಯುತ್ ಉತ್ಪಾದನೆ ಮಾಡಲು ವಿದ್ಯುತ್ ಕಾಯ್ದೆ, 2003 ರ ಸೆಕ್ಷನ್ 11 ರ ಅಡಿಯಲ್ಲಿ ಸರ್ಕಾರವು ಎಲ್ಲಾ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳಿಗೆ ನಿರ್ದೇಶನಗಳನ್ನು ನೀಡಿದೆ. ಈ ಸೆಕ್ಷನ್ ಅಡಿಯಲ್ಲಿ, ಉತ್ಪಾದನಾ ಕಂಪನಿಯು ಅಸಾಧಾರಣ ಸಂದರ್ಭಗಳಲ್ಲಿ ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ಯಾವುದೇ ಉತ್ಪಾದನಾ ಕೇಂದ್ರವನ್ನು ನಿರ್ವಹಿಸಬೇಕು ಎಂದು ರಾಜ್ಯ ಅಥವಾ ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಬಹುದು” ಎಂದು ಇಂಧನ ಸಚಿವಾಲಯ ತಿಳಿಸಿದೆ.
ಮುಖ್ಯವಾಗಿ ವಾಣಿಜ್ಯ ಕಾರಣಗಳಿಂದಾಗಿ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳ (ಜಿಬಿಎಸ್) ಸಾಮರ್ಥ್ಯವು ಪ್ರಸ್ತುತ ಗಮನಾರ್ಹ ಮಟ್ಟದಲ್ಲಿ ಬಳಕೆಯಾಗುತ್ತಿಲ್ಲ. ಆಮದು ಮಾಡಿಕೊಂಡ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ಅನ್ವಯವಾಗುವಂತೆ ಸೆಕ್ಷನ್ 11 ರ ಅಡಿಯಲ್ಲಿನ ಆದೇಶವು ಮುಂಬರುವ ಹೆಚ್ಚಿನ ಬೇಡಿಕೆಯ ಅವಧಿಯಲ್ಲಿ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳಿಂದ ವಿದ್ಯುತ್ ಲಭ್ಯತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಈ ಆದೇಶವು ಮೇ 1, 2024 ರಿಂದ ಜೂನ್ 30, 2024 ರವರೆಗೆ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆಗೆ ಮಾನ್ಯವಾಗಿರುತ್ತದೆ ಎಂದು ಇಂಧನ ಸಚಿವಾಲಯ ತಿಳಿಸಿದೆ. ಅನಿಲ ಆಧಾರಿತ ವಿದ್ಯುತ್ ಅಗತ್ಯವಿರುವ ದಿನಗಳ ಸಂಖ್ಯೆಯನ್ನು ಗ್ರಿಡ್-ಇಂಡಿಯಾ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳಿಗೆ ಮುಂಚಿತವಾಗಿ ತಿಳಿಸಲಿದೆ ಎಂದು ಸಚಿವಾಲಯ ಹೇಳಿದೆ.
ವಿತರಣಾ ಪರವಾನಗಿದಾರರೊಂದಿಗೆ ವಿದ್ಯುತ್ ಖರೀದಿ ಒಪ್ಪಂದಗಳನ್ನು (ಪಿಪಿಎ) ಹೊಂದಿರುವ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳು ಮೊದಲು ತಮ್ಮ ವಿದ್ಯುತ್ ಅನ್ನು ಪಿಪಿಎ ಹೊಂದಿರುವವರಿಗೆ ನೀಡುತ್ತವೆ. ನೀಡಲಾಗುವ ವಿದ್ಯುತ್ ಅನ್ನು ಯಾವುದೇ ಪಿಪಿಎ ಹೊಂದಿರುವವರು ಬಳಸದಿದ್ದರೆ, ಅದನ್ನು ವಿದ್ಯುತ್ ಮಾರುಕಟ್ಟೆಯಲ್ಲಿ ನೀಡಲಾಗುವುದು. ಪಿಪಿಎಗಳಿಗೆ ಸಂಬಂಧಿಸಿರದ ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳು ವಿದ್ಯುತ್ ಮಾರುಕಟ್ಟೆಯಲ್ಲಿ ತಾವು ಉತ್ಪಾದಿಸಿದ ವಿದ್ಯುತ್ ಅನ್ನು ಮಾರಾಟ ಮಾಡಬಹುದು. ಈ ನಿರ್ದೇಶನವನ್ನು ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ಕೇಂದ್ರ ವಿದ್ಯುತ್ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಬೇಸಿಗೆಯಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್ ಪೂರೈಸಲು ಅನಿಲ ಆಧಾರಿತ ಉತ್ಪಾದನಾ ಕೇಂದ್ರಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…