ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

June 23, 2025
11:40 AM

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಹುಮ್ಮಸ್ಸು ನೀಡಿದೆ. ಉತ್ತಮ ಮಳೆಯಿಂದಾಗಿ ಕೃಷಿ ಭೂಮಿ ಹದವಾಗಿದ್ದು, ಬೀಜ ಬಿತ್ತನೆಯಲ್ಲಿ ಉತ್ತಮ ಪ್ರಗತಿ ಕಂಡುಬಂದಿದೆ.  ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ 3 ಲಕ್ಷ 14 ಸಾವಿರ ಹೆಕ್ಟೇರ್ ಬಿತ್ತನೆ ಪ್ರದೇಶವಿದೆ. ಈ ಪೈಕಿ 2.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಪೂರ್ಣಗೊಂಡಿದೆ. ಉಳಿದ ಪ್ರದೇಶಗಳಲ್ಲಿ ಬಿತ್ತನೆ ಕೆಲಸ ಪ್ರಗತಿಯಲ್ಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.

ಮಳೆ ಆಶ್ರಿತದಲ್ಲಿ 2 ಲಕ್ಷ 50 ಸಾವಿರ ಹೆಕ್ಟೇರ್ ಹಾಗೂ ನೀರಾವರಿಯಲ್ಲಿ 63 ಸಾವಿರದ 769 ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆ ಗುರಿಯಿದೆ. ಈಗಾಗಲೇ, ಮಳೆ ಆಶ್ರಿತದಲ್ಲಿ 2.04 ಲಕ್ಷ ಹೆಕ್ಟೇರ್ ಹಾಗೂ ನೀರಾವರಿಯಲ್ಲಿ 29 ಸಾವಿರ ಹೆಕ್ಟೇರ್ ಬಿತ್ತನೆ ಮುಕ್ತಾಯಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಏಕದಳ, ದ್ವಿದಳ ಧಾನ್ಯ, ಎಣ್ಣೆಕಾಳುಗಳು, ವಾಣಿಜ್ಯ ಬೆಳೆಗಳ ಬಿತ್ತನೆ ನಡೆಯುತ್ತದೆ. ಜಿಲ್ಲೆಯಲ್ಲಿ ರೈತರ ಸಂಖ್ಯೆ ಹೆಚ್ಚಿರುವುದರಿಂದ, ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬಿತ್ತನೆ ಪ್ರದೇಶಕ್ಕೆ ತಕ್ಕಂತೆ ಬೀಜ ಹಾಗೂ ಗೊಬ್ಬರ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.  ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ. ಕೃಷಿ ಇಲಾಖೆಯ ಬಳಿ 26 ಸಾವಿರ 944 ಮೆಟ್ರಿಕ್ ಟನ್ ರಸಗೊಬ್ಬರ ಸಂಗ್ರಹವಿದೆ ಎಂದು ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror