ರಾಜ್ಯದಲ್ಲಿ ಹೆಚ್ಚಿದ ಹೆಚ್3ಎನ್2 ವೈರಸ್ | ಜೊತೆಗೆ ಕೋವಿಡ್-19ನಲ್ಲೂ ಏರಿಕೆ | ಹೆಚ್1ಎನ್1 ಪ್ರಕರಣಗಳಲ್ಲೂ ಹೆಚ್ಚಳ |

March 17, 2023
1:08 PM

ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವಲ್ಲೇ ಕೋವಿಡ್ ಮತ್ತು ಎಚ್1ಎನ್1 (ಹಂದಿ ಜ್ವರ) ಪ್ರಕರಣಗಳು ನಿಧಾನಗತಿಯಲ್ಲಿ ಏರಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ಇದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

Advertisement
Advertisement
Advertisement
Advertisement

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 500 ದಾಟಿದೆ. ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಅಧ್ಯಕ್ಷ ಡಾ ಎಂಕೆ ಸುದರ್ಶನ್ ಮಾತನಾಡಿ, ಕಳೆದ ಕೆಲವು ವಾರಗಳಿಂದ ಎಚ್3ಎನ್2 ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದರ ಜೊತೆಗೆ ಎಚ್1ಎನ್1 ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

Advertisement

ಕೇಂದ್ರ ಆರೋಗ್ಯ ಸಚಿವಾಲಯವು ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ, ನೆರೆಯ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದಲ್ಲೂ ವೈರಸ್‌ ಹೆಚ್ಚಾಗಿ ಹರಡುತ್ತಿರುವುದು ಕಂಡುಬರುತ್ತಿದೆ. ಕೋವಿಡ್ ಪ್ರಕರಣಗಳಲ್ಲಿ ಏಕಕಾಲದಲ್ಲಿ ಏರಿಕೆಯಾಗುತ್ತಿದ್ದು, ಐಸಿಯು ದಾಖಲಾತಿಗಳ ಸಂಖ್ಯೆಯಲ್ಲಿನ ಹೆಚ್ಚಳವು ಕಳವಳಕಾರಿ ವಿಚಾರವಾಗಿದೆ ಎಂದು ಸುದರ್ಶನ್ ಅವರು ತಿಳಿಸಿದ್ದಾರೆ.

ಮಾರ್ಚ್ 15 ರ ವೇಳೆಗೆ ರಾಜ್ಯದಲ್ಲಿ 119 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣ ಸಂಘ್ಯೆ 560ಕ್ಕೆ ಏರಿಕೆಯಾಗಿದೆ.

Advertisement

ಈ ನಡುವೆ ಕೋವಿಡ್ ನಿಂದಾಗಿ ಮಂಗಳವಾರ ರಾಜ್ಯದಲ್ಲಿ ಒಂದು ಸಾವು ಕೂಡ ವರದಿಯಾಗಿದೆ. ಮೃತರು ಬೆಂಗಳೂರಿನ 71 ವರ್ಷದ ವ್ಯಕ್ತಿಯಾಗಿದ್ದು, ಇವರಲ್ಲಿ ಜ್ವರ, ಕೆಮ್ಮು ಮತ್ತು ಉಸಿರಾಟದ ಲಕ್ಷಣಗಳು ಕಂಡು ಬಂದಿತ್ತು. ಮತ್ತು ವ್ಯಕ್ತಿ ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಂತಹ ಇತರ ರೋಗಗಳನ್ನೂ ಹೊಂದಿದ್ದರು ಎಂದು ತಿಳಿದುಬಂದಿದೆ.

ಪ್ರಸ್ತುತ ಐಸಿಯುಗೆ ದಾಖಲಾಗುತ್ತಿರುವ ಹೆಚ್ಚಿನ ರೋಗಿಗಳು ಇತರೆ ದೀರ್ಘಕಾಲಿಕ ರೋಗಗಳನ್ನು ಹೊಂದಿರುವುದು ಕಂಡು ಬರುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

Advertisement

ಆಸ್ಪತ್ರೆಗಳಲ್ಲಿ ನಿಗಾ ಹೆಚ್ಚಿಸಲಾಗಿದ್ದು, ಸೋಂಕು ಪ್ರಕರಣಗಳ ಹೆಚ್ಚಳವು ಆತಂಕಕಾರಿಯಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಐಎಲ್ಐ ಮತ್ತು ಕೋವಿಡ್ ಪ್ರಕರಣಗಳ ಲಕ್ಷಣಗಳು ಬಹುತೇಕ ಒಂದೇ ಆಗಿದ್ದು, ರೋಗ ಲಕ್ಷಣ ಇರುವ ಎಲ್ಲಾ ರೋಗಿಗಳ ಮೇಲೆ ನಿಗಾ ಇರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.

ಮಾರ್ಚ್ 13 ರಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ 2018 ರಿಂದ ಮಾರ್ಚ್ 2023 ರವರೆಗೆ 4,700 ಹೆಚ್1ಎನ್1 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 201 ಜನರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಹವಾಮಾನದಲ್ಲಿನ ಬದಲಾವಣೆಯು ಐಎಲ್ಐ ಹಾಗೂ ಸಾರಿ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror