ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ನವೀನ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿವೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜನ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಲೇ ಇದ್ದರೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ವಿಷಾದಿಸಿದರು. ಲೈಂಗಿಕ ದೌರ್ಜನ್ಯ ಕೊಲೆ, ಫೋಕ್ಸೊ ಕೇಸ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ ಸೈಬರ್ ಅಪರಾಧ ತಗ್ಗಿಲ್ಲ. ಇದಕ್ಕೆ ಕೇಂದ್ರ ಸರ್ಕಾರ ನೂತನ ಕಾಯ್ದೆಯನ್ನು ಮಾಡುವ ಅಗತ್ಯವಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel