ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

August 8, 2026
6:13 AM
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ ಸೂಚಿಸಲಾಗಿದೆ. ಕಾಗದ ಅಥವಾ ಬಟ್ಟೆಯ ಧ್ವಜಗಳನ್ನು ಬಳಸುವುದರ ಜೊತೆಗೆ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನೂ ತಪ್ಪಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳ ಸಂದರ್ಭದಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ.

ರಾಷ್ಟ್ರೀಯ ಗೌರವ ಕಾಯ್ದೆ, 1971 ಹಾಗೂ ಭಾರತದ ಧ್ವಜ ಸಂಹಿತೆ, 2002ರ ನಿಯಮಗಳಡಿ (2021 ಮತ್ತು 2022ರ ತಿದ್ದುಪಡಿಗಳೊಂದಿಗೆ) ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರು ಪ್ಲಾಸ್ಟಿಕ್ ಧ್ವಜಗಳನ್ನು ಬಳಸದಂತೆ ಸೂಚಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಕಡ್ಡಿ ಸಹಿತ ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು. ಇದರ ಬದಲಾಗಿ ಕಾಗದ ಅಥವಾ ಬಟ್ಟೆಯಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸುವಂತೆ ತಿಳಿಸಲಾಗಿದೆ. ಇಂತಹ ಧ್ವಜಗಳಿಗೆ ಮರದ ಕಡ್ಡಿ ಅಥವಾ ಪೇಪರ್ ಕಡ್ಡಿಯನ್ನು ಬಳಸಬಹುದು.

ಏಕ ಬಳಕೆಯ ಪ್ಲಾಸ್ಟಿಕ್‌ಗೂ ನಿರ್ಬಂಧ :  ರಾಷ್ಟ್ರೀಯ ಧ್ವಜದ ಗೌರವ ಕಾಪಾಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನೂ ತಪ್ಪಿಸುವಂತೆ ಸೂಚಿಸಲಾಗಿದೆ.

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಸ್ಟ್ರಾ ಸೇರಿದಂತೆ ವಿವಿಧ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ತಿಳಿಸಲಾಗಿದೆ.

ಇದರೊಂದಿಗೆ ಕ್ಲಿಂಗ್ ಫಿಲ್ಮ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಥರ್ಮೋಕಾಲ್ ಹಾಗೂ ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‌ನಿಂದ ತಯಾರಿಸಿದ ವಸ್ತುಗಳ ಬಳಕೆಯನ್ನೂ ತಪ್ಪಿಸುವಂತೆ ಸೂಚಿಸಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರಧ್ವಜಕ್ಕೆ ಗೌರವ — ಪರಿಸರಕ್ಕೂ ಕಾಳಜಿ: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಪ್ಲಾಸ್ಟಿಕ್ ಧ್ವಜಗಳ ಬದಲಿಗೆ ಕಾಗದ ಅಥವಾ ಬಟ್ಟೆಯ ಧ್ವಜಗಳನ್ನು ಬಳಸುವ ಮೂಲಕ ರಾಷ್ಟ್ರೀಯ ಗೌರವ ಮತ್ತು ಪರಿಸರ ಸಂರಕ್ಷಣೆಯನ್ನು ಒಟ್ಟಿಗೆ ಕಾಪಾಡಬಹುದಾಗಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The Union Ministry of Home Affairs has directed government institutions, private organisations and the public not to use plastic national flags during major national, cultural and sporting events. For Independence Day celebrations, people have been advised to use national flags made of paper or cloth instead of plastic flags, while avoiding single-use plastic items and other prohibited plastic materials.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror