ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳ ಸಂದರ್ಭದಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ.
ರಾಷ್ಟ್ರೀಯ ಗೌರವ ಕಾಯ್ದೆ, 1971 ಹಾಗೂ ಭಾರತದ ಧ್ವಜ ಸಂಹಿತೆ, 2002ರ ನಿಯಮಗಳಡಿ (2021 ಮತ್ತು 2022ರ ತಿದ್ದುಪಡಿಗಳೊಂದಿಗೆ) ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರು ಪ್ಲಾಸ್ಟಿಕ್ ಧ್ವಜಗಳನ್ನು ಬಳಸದಂತೆ ಸೂಚಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಕಡ್ಡಿ ಸಹಿತ ಪ್ಲಾಸ್ಟಿಕ್ ಧ್ವಜಗಳನ್ನು ಬಳಸಬಾರದು. ಇದರ ಬದಲಾಗಿ ಕಾಗದ ಅಥವಾ ಬಟ್ಟೆಯಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸುವಂತೆ ತಿಳಿಸಲಾಗಿದೆ. ಇಂತಹ ಧ್ವಜಗಳಿಗೆ ಮರದ ಕಡ್ಡಿ ಅಥವಾ ಪೇಪರ್ ಕಡ್ಡಿಯನ್ನು ಬಳಸಬಹುದು.
ಏಕ ಬಳಕೆಯ ಪ್ಲಾಸ್ಟಿಕ್‌ಗೂ ನಿರ್ಬಂಧ : ರಾಷ್ಟ್ರೀಯ ಧ್ವಜದ ಗೌರವ ಕಾಪಾಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನೂ ತಪ್ಪಿಸುವಂತೆ ಸೂಚಿಸಲಾಗಿದೆ.
ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಸ್ಟ್ರಾ ಸೇರಿದಂತೆ ವಿವಿಧ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ತಿಳಿಸಲಾಗಿದೆ.
ಇದರೊಂದಿಗೆ ಕ್ಲಿಂಗ್ ಫಿಲ್ಮ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಥರ್ಮೋಕಾಲ್ ಹಾಗೂ ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‌ನಿಂದ ತಯಾರಿಸಿದ ವಸ್ತುಗಳ ಬಳಕೆಯನ್ನೂ ತಪ್ಪಿಸುವಂತೆ ಸೂಚಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಗೌರವ — ಪರಿಸರಕ್ಕೂ ಕಾಳಜಿ: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಪ್ಲಾಸ್ಟಿಕ್ ಧ್ವಜಗಳ ಬದಲಿಗೆ ಕಾಗದ ಅಥವಾ ಬಟ್ಟೆಯ ಧ್ವಜಗಳನ್ನು ಬಳಸುವ ಮೂಲಕ ರಾಷ್ಟ್ರೀಯ ಗೌರವ ಮತ್ತು ಪರಿಸರ ಸಂರಕ್ಷಣೆಯನ್ನು ಒಟ್ಟಿಗೆ ಕಾಪಾಡಬಹುದಾಗಿದೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
The Union Ministry of Home Affairs has directed government institutions, private organisations and the public not to use plastic national flags during major national, cultural and sporting events. For Independence Day celebrations, people have been advised to use national flags made of paper or cloth instead of plastic flags, while avoiding single-use plastic items and other prohibited plastic materials.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…