Advertisement
ಸುದ್ದಿಗಳು

ಮೊಗ್ರ ಸ್ವಾತಂತ್ರ್ಯ ದಿನಾಚರಣೆ | ಮಹಿಳೆಯಿಂದ ಧ್ವಜವಂದನೆ – ವೈರಲ್‌ ಆದ ಫೋಟೊ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ ಗಾಂಧಿ ವಿಚಾರ ವೇದಿಕೆ ವತಿಯಿಂದ  ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಈ ಕಾರ್ಯಕ್ರಮದ ಬಳಿಕ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು ಧ್ವಜವಂದನೆ ಮಾಡಿದರು, ಇದೀಗ ಈ ಫೋಟೋ ವೈರಲ್‌ ಆಗಿದೆ. 

ಗಾಂಧಿ ವಿಚಾರ ವೇದಿಕೆ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ  ಪ್ರಮುಖರು ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು. ಬೆಳಗ್ಗೆ 9  ಗಂಟೆಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಗಿದ ಬಳಿಕ ಅತಿಥಿಗಳು ತೆರಳಿದ್ದರು. ಕಾರ್ಯಕ್ರಮ ಸಂಘಟಿಸಿದ ಕೆಲ ಮಂದಿ ಸ್ಥಳದಲ್ಲಿ  ಮಾತುಕತೆ ನಡೆಸುತ್ತಿದ್ದರು. ಈ ಸಂದರ್ಭ ಕೆಲಸದ ಕತ್ತಿ ಸಹಿತವಾಗಿಯೇ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆ ಪರಮೇಶ್ವರಿ ಅವರು ನೇರವಾಗಿ ಆಗಮಿಸಿ ಚಪ್ಪಲಿ ತೆಗೆದು ಧ್ವಜವಂದನೆ ಮಾಡಿ ತೆರಳಿದರು. ಈ ಫೋಟೊವನ್ನು ದೂರದಿಂದ ಗಾಂಧಿ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಲಕ್ಷ್ಮೀಶ ಗಬ್ಲಡ್ಕ ಅವರು ಕ್ಲಿಕ್ಕಿಸಿದ್ದರು, ಬಳಿಕ ತಮ್ಮ ವೇದಿಕೆಯಲ್ಲಿ  ಹಂಚಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮೀಶ ಗಬ್ಲಡ್ಕ, ” ಇದು ಗ್ರಾಮೀಣ ಭಾರತ”  ಎಂದು ವ್ಯಾಖ್ಯಾನಿಸಿದರು. ಧ್ವಜಾರೋಹಣದ ನಂತರ ಗ್ರಾಮ ಪಂಚಾಯತ್ ಸದಸ್ಯರುಗಳು ಕೂಡಾ ಆಗಮಿಸಿ ಧ್ವಜ ವಂದನೆ ಸಲ್ಲಿಸಿ ತೆರಳಿದ್ದರು.

ಮೊಗ್ರ ಪ್ರದೇಶವು ಕಳೆದ ಕೆಲವು ಸಮಯಗಳಿಂದ ಸುದ್ದಿಯಾಗಿದೆ. ಈ ಹಿಂದೆ ನೆಟ್ವರ್ಕ್‌ ಸಮಸ್ಯೆಯಿಂದ ವಿದ್ಯಾರ್ಥಿನಿಯೊಬ್ಬಳು ತಂದೆ ಕೊಡೆ ಹಿಡಿದು ಓದುತ್ತಿದ್ದ ಫೋಟೊ ದೇಶದಾದ್ಯಂತ ವೈರಲ್‌ ಆಗಿತ್ತು, ಅದಾದ ಬಳಿಕ ಗ್ರಾಮಸ್ಥರೇ ನಿರ್ಮಿಸಿದ “ಗ್ರಾಮಸೇತು” ಕೂಡಾ ದೇಶ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು  ಆಗಮಿಸಿ ಧ್ವಜ ವಂದನೆ ಮಾಡಿರುವುದು  ಕೂಡಾ ರಾಜ್ಯಾದ್ಯಂತ ಸದ್ದು ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

5 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

16 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

20 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

1 day ago