Advertisement
ಸುದ್ದಿಗಳು

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

Share

2030ರ ವೇಳೆಗೆ ಭಾರತ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ  ಹೇಳಿದ್ದಾರೆ.

ದೆಹಲಿಯಲ್ಲಿ  ನಡೆದ ಕೇಂದ್ರ ಉಗ್ರಾಣದ 70ನೇ ಸಂಸ್ಥಾಪನಾ ದಿನದ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಮೂರನೇ ಅತಿ ದೊಡ್ಡ ಆರ್ಥಿಕತೆಯ ರಾಷ್ಟ್ರವಾಗುವತ್ತ ವೇಗವಾಗಿ ಸಾಗುತ್ತಿದೆ ಎಂದು ತಿಳಿಸಿದರು.

ಕಳೆದ ಹತ್ತು-ಹನ್ನೆರಡು ವರ್ಷಗಳ ಹಿಂದೆ ದೇಶದ ಆರ್ಥಿಕತೆ ಸುಮಾರು ಎರಡು ಟ್ರಿಲಿಯನ್ ಡಾಲರ್ ಮಟ್ಟದಲ್ಲಿತ್ತು. ಈಗ ಅದು ನಾಲ್ಕು ಟ್ರಿಲಿಯನ್ ಸನಿಹದಲ್ಲಿದ್ದು, 2027ರ ವೇಳೆಗೆ 5 ಟ್ರಿಲಿಯನ್ ತಲುಪಲಿದೆ. 2030ರ ವೇಳೆಗೆ 5 ಟ್ರಿಲಿಯನ್ ಮೀರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ ಈಗ ವಿಶ್ವಾಸ, ಭರವಸೆ ಮತ್ತು ಅವಕಾಶಗಳ ನಿರ್ಣಾಯಕ ಹಂತದಲ್ಲಿ ನಿಂತಿದೆ. ಆರ್ಥಿಕ ಸುಧಾರಣೆಗಳು, ದಕ್ಷ ಆಡಳಿತ ಮತ್ತು ವೇಗದ ಅಭಿವೃದ್ಧಿ ದೇಶವನ್ನು ಜಾಗತಿಕ ವೇದಿಕೆಯಲ್ಲಿ ಮುಂಚೂಣಿಗೆ ತರುತ್ತಿವೆ ಎಂದು ಹೇಳಿದರು.

ಕೇಂದ್ರ ಉಗ್ರಾಣ ನಿಗಮವು ಆರ್ಥಿಕ ಸಾಧನೆಯಲ್ಲಿ ದಾಖಲೆ ನಿರ್ಮಿಸಿದ್ದು, ಸರಕು ಸಂಗ್ರಹ ಮತ್ತು ಗೋದಾಮು ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರವಹಿಸಿದೆ. ವಹಿವಾಟು ಮತ್ತು ಲಾಭದಲ್ಲಿ ಹಿಂದಿನ ಮಾನದಂಡಗಳನ್ನು ಮೀರಿ ಮುನ್ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Union Minister Pralhad Joshi stated that India is on track to cross the 5 trillion dollar economy mark by 2030. Speaking at the 70th Foundation Day of the Central Warehousing Corporation in Delhi, he highlighted India’s rapid economic growth under Prime Minister Narendra Modi’s leadership and emphasized the corporation’s contribution to strengthening the logistics and storage sector.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

7 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

17 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

21 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

21 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

21 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

21 hours ago