ಭಾರತವನ್ನು ಹಸಿರು ಜಲಜನಕ ರಫ್ತಿಗೆ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮತ್ತು ಅದರ ಜಾಗತಿಕ ಬೇಡಿಕೆಯ ಸುಮಾರು 10 ಪ್ರತಿಶತವನ್ನು ವಶಪಡಿಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್ ದೆಹಲಿಯಲ್ಲಿ ಹೇಳಿದ್ದಾರೆ.
ಹಸಿರು ಜಲಜನಕ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು, ಭಾರತದಲ್ಲಿ ಹಸಿರು ಜಲಜನಕ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಕಳೆದ ಜೂನ್ ತಿಂಗಳ ಅವಧಿಯವರೆಗೆ, ಭಾರತದ ಸಂಚಿತ ಸ್ಥಾಪಿತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಸುಮಾರು 237 ಗಿಗಾವ್ಯಾಟ್‌ಗಳನ್ನು ತಲುಪಿದೆ. 2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು. 5 ರಾಜ್ಯಗಳು ಈಗಾಗಲೇ ತಮ್ಮ ಹಸಿರು ಜಲಜನಕ ನೀತಿಗಳನ್ನು ಪ್ರಕಟಿಸಿವೆ ಮತ್ತು ಇನ್ನೂ ಹಲವಾರು ಈ ದಿಕ್ಕಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಈ ರಾಜ್ಯಗಳು ಭೂ ಹಂಚಿಕೆಯನ್ನು ಸುಗಮಗೊಳಿಸುತ್ತಿವೆ, ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುತ್ತಿವೆ ಎಂದರು. ನಾವು ಭಾರತವನ್ನು ಪ್ರಮುಖ ಉತ್ಪಾದಕರನ್ನಾಗಿ ಮಾತ್ರವಲ್ಲದೆ ಜಾಗತಿಕ ಹಸಿರು ಜಲಜನಕ ರಫ್ತಿನ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ, ಇದರಿಂದಾಗಲೇ ಸರ್ಕಾರವು 2023 ರಲ್ಲಿ 19,744 ಕೋಟಿ ರೂಪಾಯಿ ವೆಚ್ಚದೊಂದಿಗೆ ರಾಷ್ಟ್ರೀಯ ಹಸಿರು ಜಲಜನಕ ಮಿಷನ್ ಅನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ” WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…