Advertisement
MIRROR FOCUS

2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದನೆಯ ಗುರಿ

Share

ಭಾರತವನ್ನು ಹಸಿರು ಜಲಜನಕ ರಫ್ತಿಗೆ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮತ್ತು ಅದರ ಜಾಗತಿಕ ಬೇಡಿಕೆಯ ಸುಮಾರು 10 ಪ್ರತಿಶತವನ್ನು ವಶಪಡಿಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್ ದೆಹಲಿಯಲ್ಲಿ ಹೇಳಿದ್ದಾರೆ.

ಹಸಿರು ಜಲಜನಕ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಅವರು,  ಭಾರತದಲ್ಲಿ ಹಸಿರು ಜಲಜನಕ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ.  ಕಳೆದ ಜೂನ್ ತಿಂಗಳ ಅವಧಿಯವರೆಗೆ, ಭಾರತದ ಸಂಚಿತ ಸ್ಥಾಪಿತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಸುಮಾರು 237 ಗಿಗಾವ್ಯಾಟ್‌ಗಳನ್ನು ತಲುಪಿದೆ. 2030 ರ ವೇಳೆಗೆ ಭಾರತವು 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಜಲಜನಕ ಉತ್ಪಾದಿಸುವ  ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದರು.  5 ರಾಜ್ಯಗಳು ಈಗಾಗಲೇ ತಮ್ಮ ಹಸಿರು ಜಲಜನಕ ನೀತಿಗಳನ್ನು ಪ್ರಕಟಿಸಿವೆ ಮತ್ತು ಇನ್ನೂ ಹಲವಾರು ಈ ದಿಕ್ಕಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಈ ರಾಜ್ಯಗಳು ಭೂ ಹಂಚಿಕೆಯನ್ನು ಸುಗಮಗೊಳಿಸುತ್ತಿವೆ, ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುತ್ತಿವೆ ಎಂದರು.  ನಾವು ಭಾರತವನ್ನು ಪ್ರಮುಖ ಉತ್ಪಾದಕರನ್ನಾಗಿ ಮಾತ್ರವಲ್ಲದೆ ಜಾಗತಿಕ ಹಸಿರು ಜಲಜನಕ ರಫ್ತಿನ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ,  ಇದರಿಂದಾಗಲೇ ಸರ್ಕಾರವು 2023 ರಲ್ಲಿ 19,744 ಕೋಟಿ ರೂಪಾಯಿ ವೆಚ್ಚದೊಂದಿಗೆ ರಾಷ್ಟ್ರೀಯ ಹಸಿರು ಜಲಜನಕ ಮಿಷನ್ ಅನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

3 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

4 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

5 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

5 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago