ಮುಂಬರುವ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್‌ಕ್ಲೂಸಿವ್ ಅಲೈನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು. 26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ ಎಂದರು. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…