Advertisement
The Rural Mirror ವಾರದ ವಿಶೇಷ

ಭಾರತದ 11,000 ಕಿ.ಮೀ ಕರಾವಳಿ ಅಪಾಯದ ಅಂಚಿನಲ್ಲಿ – ಮುಂದಿನ 15 ವರ್ಷ ಕರಾವಳಿ ಕರ್ನಾಟಕಕ್ಕೆ ನಿರ್ಣಾಯಕ | ಹೊಸ ಹವಾಮಾನ ವರದಿ ಎಚ್ಚರಿಕೆ

Share

ಭಾರತದ 11,000 ಕಿಲೋಮೀಟರ್ ಉದ್ದದ ಕರಾವಳಿ ಪ್ರದೇಶಗಳು ಮುಂದಿನ ಕೆಲವೇ ವರ್ಷಗಳಲ್ಲಿ ಗಂಭೀರ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ಹೊಸ ವರದಿ ಎಚ್ಚರಿಸಿದೆ. “Indian Coastal Region: Climate Projections 2021-2040” ಎಂಬ ಅಧ್ಯಯನ ವರದಿ, 2040ರೊಳಗಿನ ಹವಾಮಾನ ಬದಲಾವಣೆಗಳ ಪರಿಣಾಮಗಳನ್ನು ಜಿಲ್ಲಾಮಟ್ಟದಲ್ಲಿ ವಿಶ್ಲೇಷಿಸಿದ್ದು, ತಕ್ಷಣದ ಹೊಂದಾಣಿಕೆ ಕ್ರಮಗಳ ಅಗತ್ಯವನ್ನು ಒತ್ತಿ ಹೇಳಿದೆ.

ವರದಿಯ ಪ್ರಕಾರ, ಭಾರತದ ಹಲವು ಕರಾವಳಿ ಜಿಲ್ಲೆಗಳು 1.5°C ತಾಪಮಾನ ಏರಿಕೆಯ ಮಿತಿಯನ್ನು ಶೀಘ್ರದಲ್ಲೇ ತಲುಪುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಒಡಿಶಾದ ಅನೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು 1°C ರಿಂದ 1.3°C ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಮುಂದಿನ 15 ವರ್ಷಗಳಲ್ಲಿ ಸುಮಾರು 1.1°C ತಾಪಮಾನ ಏರಿಕೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರಿಂದ ಉಷ್ಣಾಂಶದ ಒತ್ತಡ ಅಂದರೆ Heat Stress ಹೆಚ್ಚುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದೆ.

ವರದಿಯ ಮತ್ತೊಂದು ಆತಂಕಕಾರಿ ಅಂಶವೆಂದರೆ ಸಮುದ್ರ ಮಟ್ಟದ ಏರಿಕೆ. 2050ರ ವೇಳೆಗೆ ಜಾಗತಿಕ ಸಮುದ್ರ ಮಟ್ಟವು ಸುಮಾರು 15 ಸೆಂ.ಮೀ. ಏರಿಕೆಯಾಗುವ ಸಾಧ್ಯತೆ ಇದ್ದು, ಇದರಿಂದ ಕರಾವಳಿ ಕುಸಿತ, ಉಪ್ಪುನೀರು ಒಳನುಗ್ಗುವಿಕೆ ಹಾಗೂ ಪ್ರವಾಹದ ಅಪಾಯ ಹೆಚ್ಚಾಗಬಹುದು. ಮೀನುಗಾರಿಕೆ, ಕೃಷಿ ಹಾಗೂ ಕರಾವಳಿ ಗ್ರಾಮಗಳ ಜೀವನೋಪಾಯಗಳ ಮೇಲೆ ಇದು ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.

ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದ್ದು, ಮುಂಬೈನಲ್ಲಿ ಭಾರೀ ಮಳೆಯ ದಿನಗಳು ಹೆಚ್ಚಾಗಬಹುದು ಎಂದು ವರದಿ ಹೇಳಿದೆ. ಸೂರತ್ ಪ್ರದೇಶದಲ್ಲಿ ದಕ್ಷಿಣ-ಪಶ್ಚಿಮ ಮುಂಗಾರು ಮಳೆ ಸುಮಾರು 23% ಹೆಚ್ಚಾಗುವ ಸಾಧ್ಯತೆ ವ್ಯಕ್ತಪಡಿಸಲಾಗಿದೆ.

ಸಮುದ್ರದ ಮೇಲ್ಮೈ ತಾಪಮಾನವು ಪ್ರತಿ ದಶಕಕ್ಕೆ ಸುಮಾರು 0.27°C ಏರಿಕೆಯಾಗುತ್ತಿರುವುದರಿಂದ ಭವಿಷ್ಯದಲ್ಲಿ ಹೆಚ್ಚು ತೀವ್ರ ಚಂಡಮಾರುತಗಳು ರೂಪುಗೊಳ್ಳುವ ಸಾಧ್ಯತೆಯೂ ಇದೆ ಎಂದು ಅಧ್ಯಯನ ಎಚ್ಚರಿಸಿದೆ.

ಕೇರಳದಲ್ಲಿ ಹೆಚ್ಚುತ್ತಿರುವ ವೆಟ್-ಬಲ್ಬ್ ತಾಪಮಾನ (Wet Bulb Temperature), ಸುಂದರ್‌ಬನ್ಸ್ ಪ್ರದೇಶದಲ್ಲಿ ಉಪ್ಪು ನೀರಿನ ಪ್ರಭಾವ, ಗೋವಾದ ಉಪ್ಪು ಉತ್ಪಾದನೆ ಮೇಲಿನ ಪರಿಣಾಮ ಹಾಗೂ ಸಮುದ್ರದ ತಾಪಮಾನ ಏರಿಕೆಯಿಂದ ಮೀನುಗಳ ಚಲನವಲನ ಬದಲಾಗುತ್ತಿರುವುದು ಈಗಾಗಲೇ ಕಂಡುಬರುತ್ತಿರುವ ಬದಲಾವಣೆಗಳೆಂದು ವರದಿ ಉಲ್ಲೇಖಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಸಿಇಒ ಅನುರಾಗ್‌ ಬಹಾರ್‌ ಅವರ ಪ್ರಕಾರ, “ಹವಾಮಾನ ಬದಲಾವಣೆ ಭವಿಷ್ಯದ ಸಮಸ್ಯೆಯಲ್ಲ, ಅದು ಈಗಾಗಲೇ ಆರಂಭವಾಗಿರುವ ವಾಸ್ತವ.” ಸ್ಥಳೀಯ ಆಡಳಿತಗಳು, ಸರ್ಕಾರಗಳು ಹಾಗೂ ಸಮುದಾಯಗಳು ಜಿಲ್ಲಾಮಟ್ಟದ ಹವಾಮಾನ ಹೊಂದಾಣಿಕೆ ಯೋಜನೆಗಳನ್ನು ತಕ್ಷಣ ರೂಪಿಸಬೇಕಾದ ಅಗತ್ಯವಿದೆ ಎಂದು ವರದಿ ಸೂಚಿಸಿದೆ.

A new report by Azim Premji University warns that India’s 11,000-km coastline faces immediate climate risks between 2021 and 2040. Rising temperatures, sea-level rise, extreme rainfall, coastal erosion, and stronger cyclones could significantly affect livelihoods, agriculture, fisheries, and coastal communities across India.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 hour ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

9 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

9 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

14 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

14 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

23 hours ago