ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ#AsianGames2023 ಭಾರತ ನೂರು ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಕ್ರೀಡಾಕೂಟದ 14ನೇ ದಿನದಂದು ಭಾರತದ ಮಹಿಳಾ ಕಬ್ಬಡಿ ತಂಡ ಚಿನ್ನ ಗೆಲ್ಲುವ ಮೂಲಕ ಪದಕಗಳ ಶತಕವನ್ನು ಪೂರೈಸಿತು. ಈ 14 ದಿನಗಳಲ್ಲಿ ಏಷ್ಯಾಡ್ ಪ್ರಯಾಣದಲ್ಲಿ ಭಾರತ ಇದುವರೆಗೆ ಒಟ್ಟು 100 ಪದಕಗಳನ್ನು ಗೆದ್ದಿದ್ದು, ಇದರಲ್ಲಿ 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಸೇರಿವೆ. ಏಷ್ಯನ್ ಗೇಮ್ಸ್ 2023ರ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಚೊಚ್ಚಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.
ಆರ್ಚರಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಜ್ಯೋತಿ ವೆನ್ನಮ್ ದಿನವನ್ನು ಆರಂಭಿಸಿದರೆ, ಅದಿತಿ ಸ್ವಾಮಿ ಕಾಂಪೌಂಡ್ ಆರ್ಚರಿಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ. ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ, ‘ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿರುವುದು ಭಾತೀಯರು ರೋಮಾಂಚನಗೊಳ್ಳುವಂತೆ ಮಾಡಿದೆ. ಭಾರತದ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣರಾದ ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಕ್ಟೋಬರ್ 10 ರಂದು ನಮ್ಮ ಏಷ್ಯನ್ ಗೇಮ್ಸ್ ತಂಡ ಮತ್ತು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ತಮ್ಮ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಏಷ್ಯನ್ ಗೇಮ್ಸ್ 2023ರ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಚೊಚ್ಚಲ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಶನಿವಾರ ಅಫ್ಘಾನಿಸ್ತಾನದ ವಿರುದ್ಧ ನಡೆದ ಫೈನಲ್ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಆದ್ರೆ ಟೀಂ ಇಂಡಿಯಾಉತ್ತಮ ರನ್‌ರೇಟ್ ಹೊಂದಿದ್ದರಿಂದ ಚಿನ್ನದ ಪದಕ ಗೆದ್ದುಕೊಂಡಿತು. ಅಫ್ಘಾನಿಸ್ತಾನ ತಂಡ 2010 ಮತ್ತು 2014ರಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿತ್ತು. ಈ ಬಾರಿಯೂ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ತಲುಪಿದ್ದಾರೆ. ಇದಕ್ಕೂ ಮುನ್ನ ಭಾರತ ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆದ್ದಿತ್ತು. ಈಗ ರುತುರಾಜ್ ಗಾಯಕ್ವಾಡ್ ನೇತೃತ್ವದ ತಂಡ ಕೂಡ ಇದೇ ರೀತಿಯ ಯಶಸ್ಸನ್ನು ಸಾಧಿಸುವ ನಿರೀಕ್ಷೆಯಿದೆ.
– ಅಂತರ್ಜಾಲ ಮಾಹಿತಿ