Advertisement
MIRROR FOCUS

#AsianGames2023 | ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗಳಿಗೆಯಲ್ಲಿ ನೂರರ ಗಡಿ ದಾಟಿದ ಭಾರತ | ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Share

ಚೀನಾದಲ್ಲಿ ನಡೆಯುತ್ತಿರುವ 19ನೇ ಏಷ್ಯನ್‌ ಕ್ರೀಡಾಕೂಟದಲ್ಲಿ#AsianGames2023 ಭಾರತ ನೂರು ಪದಕಗಳನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ. ಕ್ರೀಡಾಕೂಟದ 14ನೇ ದಿನದಂದು ಭಾರತದ ಮಹಿಳಾ ಕಬ್ಬಡಿ ತಂಡ ಚಿನ್ನ ಗೆಲ್ಲುವ ಮೂಲಕ ಪದಕಗಳ ಶತಕವನ್ನು ಪೂರೈಸಿತು. ಈ 14 ದಿನಗಳಲ್ಲಿ ಏಷ್ಯಾಡ್ ಪ್ರಯಾಣದಲ್ಲಿ ಭಾರತ ಇದುವರೆಗೆ ಒಟ್ಟು 100 ಪದಕಗಳನ್ನು ಗೆದ್ದಿದ್ದು, ಇದರಲ್ಲಿ 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳು ಸೇರಿವೆ. ಏಷ್ಯನ್‌ ಗೇಮ್ಸ್‌ 2023ರ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ಚೊಚ್ಚಲ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಆರ್ಚರಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಜ್ಯೋತಿ ವೆನ್ನಮ್ ದಿನವನ್ನು ಆರಂಭಿಸಿದರೆ, ಅದಿತಿ ಸ್ವಾಮಿ ಕಾಂಪೌಂಡ್ ಆರ್ಚರಿಯಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿದ್ದಾರೆ. ಭಾರತದ ಈ ಸಾಧನೆಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶ್ಲಾಘಿಸಿರುವ ಮೋದಿ, ‘ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹತ್ವದ ಸಾಧನೆ ಮಾಡಿದೆ. ನಾವು 100 ಪದಕಗಳ ಗಮನಾರ್ಹ ಮೈಲಿಗಲ್ಲನ್ನು ತಲುಪಿರುವುದು ಭಾತೀಯರು ರೋಮಾಂಚನಗೊಳ್ಳುವಂತೆ ಮಾಡಿದೆ. ಭಾರತದ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣರಾದ ನಮ್ಮ ಅಸಾಧಾರಣ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಕ್ಟೋಬರ್ 10 ರಂದು ನಮ್ಮ ಏಷ್ಯನ್ ಗೇಮ್ಸ್ ತಂಡ ಮತ್ತು ನಮ್ಮ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲು ನಾನು ಎದುರು ನೋಡುತ್ತಿದ್ದೇನೆ ಎಂದು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಏಷ್ಯನ್‌ ಗೇಮ್ಸ್‌ 2023ರ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ಚೊಚ್ಚಲ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಶನಿವಾರ ಅಫ್ಘಾನಿಸ್ತಾನದ ವಿರುದ್ಧ ನಡೆದ ಫೈನಲ್‌ ಪಂದ್ಯವು ಮಳೆಯಿಂದಾಗಿ ರದ್ದಾಯಿತು. ಆದ್ರೆ ಟೀಂ ಇಂಡಿಯಾಉತ್ತಮ ರನ್‌ರೇಟ್‌ ಹೊಂದಿದ್ದರಿಂದ ಚಿನ್ನದ ಪದಕ ಗೆದ್ದುಕೊಂಡಿತು.  ಅಫ್ಘಾನಿಸ್ತಾನ ತಂಡ 2010 ಮತ್ತು 2014ರಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿತ್ತು. ಈ ಬಾರಿಯೂ ಪಾಕಿಸ್ತಾನವನ್ನು ಸೋಲಿಸಿ ಫೈನಲ್ ತಲುಪಿದ್ದಾರೆ. ಇದಕ್ಕೂ ಮುನ್ನ ಭಾರತ ಮಹಿಳಾ ಕ್ರಿಕೆಟ್‌ನಲ್ಲಿ ಚಿನ್ನದ ಪದಕ ಗೆದ್ದಿತ್ತು. ಈಗ ರುತುರಾಜ್ ಗಾಯಕ್ವಾಡ್ ನೇತೃತ್ವದ ತಂಡ ಕೂಡ ಇದೇ ರೀತಿಯ ಯಶಸ್ಸನ್ನು ಸಾಧಿಸುವ ನಿರೀಕ್ಷೆಯಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

16 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

20 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago