ಭಾರತ ಸದ್ಯದಲ್ಲೇ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಲಿದೆ. ದೇಶದ ಬೆಳವಣಿಗೆಯಲ್ಲಿ ಪ್ರಧಾನಮಂತ್ರಿ ಜನಧನ್ ಯೋಜನೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗೌವರ್ನರ್ ಸಂಜಯ್ ಮಲ್ಹೋತ್ರ ಹೇಳಿದ್ದಾರೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಸರ್ಕಾರಿ ಸಾಮ್ಯದ ಬ್ಯಾಂಕುಗಳ ಹಣಕಾಸು ಸೇರ್ಪಡೆ ಅಭಿಯಾನದಲ್ಲಿ ಪಾಲ್ಗೊಂಡ ಅವರು, ಹನ್ನೊಂದು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಸಹಯೋಗದಲ್ಲಿ ಜನಧನ್ ಯೋಜನೆಯನ್ನು ಜಾರಿಗೆ ತರುವ ಮೂಲಕ ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿತ್ತು. ಸುಮಾರು 55 ಕೋಟಿ ಜನಧನ್ ಖಾತೆಗಳನ್ನು ತೆರೆಯಲಾಗಿದ್ದು, ದೇಶದ ಎಲ್ಲಾ ವರ್ಗಗಳನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಸೇರ್ಪಡೆಗೊಳಿಸಲಾಯಿತು. ಉಳಿತಾಯ, ಪಿಂಚಣಿ, ವಿಮೆ, ಸಾಲ ಸೌಲಭ್ಯ ಮತ್ತಿತರ ಸೇವೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….

