ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

July 17, 2025
9:51 PM

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ, ಕೈಗೆಟಕುವ ದರ ಹಾಗೂ ಸುಸ್ಥಿರತೆಯ ಅಂಶಗಳನ್ನು ಯಶಸ್ವಿಯಾಗಿ ದಾಟಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ದೆಹಲಿಯಲ್ಲಿ ಸಭೆಯನ್ನು  ಉದ್ದೇಶಿಸಿ  ಅವರು, ಭಾರತ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಗುಂಪನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಹೈಡ್ರೋಕಾರ್ಬನ್ ಪರಿಶೋಧನೆ ಹಾಗೂ ಪರವಾನಗಿ ನೀತಿ ವ್ಯವಸ್ಥೆಯ 10ನೇ ಸುತ್ತಿನ  ಬಿಡ್ಡಿಂಗ್ ಅಡಿ ಸರ್ಕಾರ 2 ಲಕ್ಷ ಚದರ ಕಿಲೋ ಮೀಟರ್ ಗಳಿಂತಲೂ ಹೆಚ್ಚು ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಗಳಿಗಾಗಿ ಅನ್ವೇಷಿಸುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತ್ಯದ ವೇಳೆಗೆ ಪರಿಶೋಧನಾ ಪ್ರದೇಶವನ್ನು 0.5 ಮಿಲಿಯನ್ ಕಿಲೋ ಮೀಟರ್ ಗೆ, 2030ರ ವೇಳೆಗೆ ಒಂದು ಮಿಲಿಯನ್ ಚದರ ಕಿಲೋ ಮೀಟರ್ ಗೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror