ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ, ಕೈಗೆಟಕುವ ದರ ಹಾಗೂ ಸುಸ್ಥಿರತೆಯ ಅಂಶಗಳನ್ನು ಯಶಸ್ವಿಯಾಗಿ ದಾಟಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಅವರು, ಭಾರತ ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಗುಂಪನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಹೈಡ್ರೋಕಾರ್ಬನ್ ಪರಿಶೋಧನೆ ಹಾಗೂ ಪರವಾನಗಿ ನೀತಿ ವ್ಯವಸ್ಥೆಯ 10ನೇ ಸುತ್ತಿನ ಬಿಡ್ಡಿಂಗ್ ಅಡಿ ಸರ್ಕಾರ 2 ಲಕ್ಷ ಚದರ ಕಿಲೋ ಮೀಟರ್ ಗಳಿಂತಲೂ ಹೆಚ್ಚು ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಗಳಿಗಾಗಿ ಅನ್ವೇಷಿಸುತ್ತಿದೆ ಎಂದು ಹೇಳಿದರು. ಈ ವರ್ಷದ ಅಂತ್ಯದ ವೇಳೆಗೆ ಪರಿಶೋಧನಾ ಪ್ರದೇಶವನ್ನು 0.5 ಮಿಲಿಯನ್ ಕಿಲೋ ಮೀಟರ್ ಗೆ, 2030ರ ವೇಳೆಗೆ ಒಂದು ಮಿಲಿಯನ್ ಚದರ ಕಿಲೋ ಮೀಟರ್ ಗೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು.
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…
ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ…