ಕಾಫಿ ರಫ್ತಿನಲ್ಲಿ ವಿಶ್ವದ ಐದನೇ ಅತಿದೊಡ್ಡ ರಾಷ್ಟ್ರವಾಗಿದ್ದು, 4.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆಯಲಾಗುತ್ತಿದೆ. 2023-24ರಲ್ಲಿ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು ಮಾಡಲಾಗಿದೆ ಎಂದು ಕಾಫಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಜಿ. ಜಗದೀಶ್ ತಿಳಿಸಿದ್ದಾರೆ. ಕಾಫಿ ಉತ್ಪಾದನೆಯಲ್ಲಿ ಭಾರತ, ವಿಶ್ವದಲ್ಲಿಯೇ 7ನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಜಾಗತಿಕವಾಗಿ ಶೇ. 3.55 ರಷ್ಟು ಕೊಡುಗೆ ನೀಡುತ್ತಿದೆ.ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಫಿ ಬೆಳೆಯಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಅರಕ್ಕು ಕಾಫಿ ಬೆಳೆಯಲಾಗುತ್ತಿದೆ. ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ ತೊಡಗಿಸಿಕೊಂಡಿರುವುದಾಗಿ ಜಗದೀಶ್ ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel