ಭಾರತ ದಿನದಿಂದ ದಿನಕ್ಕೆ ಜಾಗತೀಕವಾಗಿ ಉತ್ತುಂಗಕ್ಕೆ ಏರುತ್ತಿದ್ರೆ, ನಮ್ಮ ಶತ್ರು ದೇಶ ಪಾಕಿಸ್ತಾನ ದಿನದಿಂದ ದಿನಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಬಗ್ಗೆ ಸ್ವತಃ ಪಾಕಿಸ್ಥಾನದ ಮಂದಿಯೇ ಬೇಸರಿಸಿಕೊಂಡಿದ್ದಾರೆ. ಈಗ ಭಾರತವು ಚಂದ್ರನನ್ನು ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಬೇಸರ ವ್ಯಕ್ತಪಡಿಸಿದ್ದಾರೆ.
ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಭಾರತವು ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಬಹಳ ಯಶಸ್ವಿಯಾಗಿ ನಡೆಸಿದೆ. ಆದರೆ ಇಂದು ಪಾಕಿಸ್ತಾನದ ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ ಸಾಧನೆಯನ್ನು ಪಾಕಿಸ್ತಾನಕ್ಕೆ ಸಾಧಿಸಲು ಏಕೆ ಸಾಧ್ಯವಾಗಲಿಲ್ಲ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
1990 ರಲ್ಲಿ ತಮ್ಮ ಸರ್ಕಾರ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳನ್ನು ಭಾರತ ಅನುಸರಿಸಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಭಾರತದ ವಿದೇಶಿ ವಿನಿಮಯ ಕೇವಲ ಒಂದು ಶತಕೋಟಿ ಡಾಲರ್‍ಗಳಷ್ಟಿತ್ತು. ಆದರೆ ಈಗ ಅದು 600 ಶತಕೋಟಿ ಡಾಲರ್‍ಗೆ ಏರಿದೆ. ಭಾರತ ಇಂದು ಎಲ್ಲಿಗೆ ತಲುಪಿದೆ?, ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ ಎಂದು ಪ್ರಶ್ನಿಸಿದರು.
ಇದೇ ವೇಳೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎ ಮುಖ್ಯಸ್ಥ ಫೈಜ್ ಹಮೀದ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಮಿಯಾನ್ ಸಾಕಿಬ್ ನಿಸಾರ್ ಅವರು ಪಾಕಿಸ್ತಾನದ ಈ ಸ್ಥಿತಿಗೆ ಕಾರಣ ಎಂದು ನವಾಜ್ ಷರೀಫ್ ದೂರಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ರಾಜಕೀಯ ಪ್ರಚಾರವನ್ನು ಮುನ್ನಡೆಸಲು ಷರೀಫ್ ಮೊದಲ ಬಾರಿಗೆ ಅಕ್ಟೋಬರ್ 21 ರಂದು ದೇಶಕ್ಕೆ ಹಿಂದಿರುಗುವುದಾಗಿ ಘೋಷಿಸಿದ್ದಾರೆ. ಯುಕೆಯಲ್ಲಿ ನಾಲ್ಕು ವರ್ಷಗಳ ಸ್ವಯಂ-ಘೋಷಿತ ಗಡಿಪಾರು ಕೊನೆಗೊಳ್ಳಲಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ಷರೀಫ್ ಘೋಷಿಸಿದರು.
Source : Digital Media
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…