ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಲವಾರು ಯೋಜನೆಗಳಿಂದ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ದೇಶವಾಗಿ ದಾಪುಗಾಲು ಇಟ್ಟಿದೆ. ಈ ಮೂಲಕ ವಿಕಸಿತ ಭಾರತದ ಕಡೆಗೆ ದೇಶದ ಪಯಣ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತವನ್ನು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನಾಗಿ ಮುನ್ನಡೆಸುತ್ತಿರುವ ಸರ್ಕಾರದ ಹೆಗ್ಗುರುತಿನ ಉಪಕ್ರಮಗಳನ್ನು ಎತ್ತಿ ತೋರಿಸುವ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಬರೆದ ಲೇಖನಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಪ್ರತಿಕ್ರಿಯೆ ನೀಡಿದ್ದಾರೆ. ರಾಷ್ಟ್ರೀಯ ನಿರ್ಣಾಯಕ ಖನಿಜಗಳ ಮಿಷನ್, ಮಿಷನ್ ಸುದರ್ಶನ ಚಕ್ರ, ವಿಕಸಿತ ಭಾರತ್ ರೋಜ್‌ಗಾರ್ ಯೋಜನೆ, ರಾಷ್ಟ್ರೀಯ ಆಳ ಜಲ ಪರಿಶೋಧನೆ ಮುಂತಾದ ಯೋಜನೆಗಳಿಂದ ದೇಶದ ಅರ್ಥವ್ಯವಸ್ಥೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ” WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…

