Advertisement
MIRROR FOCUS

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

Share

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಈ ವಲಯವನ್ನು ಇನ್ನಷ್ಟು ಬಲಪಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು  ನೀತಿ ಆಯೋಗದ  ಕಾರ್ಯ ನಿರ್ವಹಣಾಧಿಕಾರಿ  ಬಿ.ವಿ.ಆರ್. ಸುಬ್ರಹ್ಮಣ್ಯಂ ದೆಹಲಿಯಲ್ಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರವಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ವಲಯ. ಸಾವಯವ ಮತ್ತು ಅ ಜೈವಿಕ ಎರಡೂ ರಾಸಾಯನಿಕಗಳು ಇಲ್ಲಿ ಉತ್ಪಾದನೆಯಾಗುತ್ತಿವೆ ಎಂದರು. ಜಾಗತಿಕ ರಾಸಾಯನಿಕ ಉದ್ಯಮವು ಪ್ರಮುಖ ಪರಿವರ್ತನೆಗೆ ಒಳಗಾಗುತ್ತಿದೆ. ಜಾಗತಿಕ ರಾಸಾಯನಿಕ ಮೌಲ್ಯ ಸರಪಳಿಗಳಲ್ಲಿ ಭಾರತದ ಶೇಕಡಾ 3.5 ರಷ್ಟು ಪಾಲನ್ನು ನೀಡುತ್ತಿದ್ದರೂ ಕೆಲವೊಂದು ಸಮಸ್ಯೆಗಳನ್ನು ಈ ವಲಯವು ಅನುಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಪೂರೈಕೆ ಸರಪಳಿಗಳನ್ನು ಬದಲಾಯಿಸುವುದು, ಹಸಿರು ರಾಸಾಯನಿಕಗಳಿಗೆ ಬೇಡಿಕೆ ಒದಗಿಸುವುದು ಮತ್ತು  ಸುಸ್ಥಿರತೆಯ ಮೇಲೆ ಹೆಚ್ಚಿನ ಗಮನ ಹರಿಸುವತ್ತ ಚಿತ್ತ ಹರಿಸಲಾಗಿದೆ ಎಂದರು. ಈ ಸುಧಾರಣೆಗಳಿಂದ ಭಾರತವು 2030 ರ ವೇಳೆಗೆ ಜಾಗತಿಕ ರಾಸಾಯನಿಕ ಮೌಲ್ಯ ಸರಪಳಿಯಲ್ಲಿ ಶೇಕಡಾ 5 ರಿಂದ 6 ರಷ್ಟು ಪಾಲನ್ನು ಹೊಂದಿರುವ ಜಾಗತಿಕ ರಾಸಾಯನಿಕ ಉತ್ಪಾದನಾ ಶಕ್ತಿ ಕೇಂದ್ರವಾಗಲಿದೆ ಎಂದರು. ಇದೇ ಮುಂದುವರೆದರೆ 2040 ರ ವೇಳೆಗೆ ಭಾರತವು 1 ಟ್ರಿಲಿಯನ್ ಡಾಲರ್‌ ರಾಸಾಯನಿಕ ವಲಯವನ್ನು ತಲುಪುವ ಮತ್ತು ಶೇಕಡಾ 12 ರಷ್ಟು ಜಾಗತಿಕ ಮೌಲ್ಯ ಸರಪಳಿ  ಪಾಲನ್ನು ಸಾಧಿಸುವ ನಿರೀಕ್ಷೆ ಇದೆ  ಅಲ್ಲದೆ, 7 ಲಕ್ಷ ಹೆಚ್ಚುವರಿ ಉದ್ಯೋಗ ಕೂಡಾ ಸೃಷ್ಟಿಯಾಗಲಿದೆ ಎಂದು ಸುಬ್ರಹ್ಮಣ್ಯಂ ತಿಳಿಸಿದರು.

NITI Aayog released its report “Chemical Industry: Powering India’s Participation in Global Value Chains”. This report offers an extensive analysis of India’s chemical sector, highlighting both opportunities and challenges, and outlining a pathway for positioning India as a key player in global chemical markets.  India’s 3.5% share in global chemical value chains and its chemical trade deficit at USD 31 billion in 2023, underscores its high dependence on imported feedstock and specialty chemicals.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

9 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

10 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

11 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

12 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

23 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago