ಜಾಗತಿಕ ಆರ್ಥಿಕತೆಯಲ್ಲಿ ಭಾರತ ನಾಲ್ಕನೇ ಅತಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿರುವುದಕ್ಕೆ ಕೇಂದ್ರ ಸರ್ಕಾರದ ದೂರದೃಷ್ಟಿಯ ನೀತಿಗಳು ಕಾರಣವಾಗಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು- ಕಾಶ್ಮೀರದಲ್ಲಿ ಅವರು, ಕೆಲವು ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದುರ್ಬಲ ಆರ್ಥಿಕತೆಯುಳ್ಳ ದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿತ್ತು. ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯತ್ನದ ಫಲವಾಗಿ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳವಣಿಗೆ ಹೊಂದಿದ್ದು, ಈಗ 4ನೇ ಸ್ಥಾನಕ್ಕೆ ಏರಿದೆ ಎಂದು ಹೇಳಿದರು. ವಿಕಸಿತ ಭಾರತಕ್ಕೆ ದೇಶದ ಎಲ್ಲಾ ನಾಗರಿಕರು ಕೊಡುಗೆ ನೀಡಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ. ಭಾರತದ ಪ್ರಗತಿಗೆ ಪೂರಕವಾಗುವಂತಹ ಕ್ರಮಗಳನ್ನು ಕೈಗೊಂಡ ಪರಿಣಾಮವಾಗಿ ಎಲ್ಲಾ ವಲಯಗಳಲ್ಲೂ ಅಪಾರ ಬೆಳವಣಿಗೆ ಉಂಟಾಗಿದೆ ಎಂದು ತಿಳಿಸಿದರು.
ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ…
ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ…
ಮುಕ್ತ ವ್ಯಾಪಾರ ಒಪ್ಪಂದ (Free Trade Agreement) ಜಾರಿಗೆ ಬಂದ ನಂತರ ಭಾರತದಿಂದ…
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…