Advertisement
ಪ್ರಮುಖ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

Share

ಹವಾಮಾನ ಬದಲಾವಣೆ ಮತ್ತು ವೇಗವಾಗಿ ಹೆಚ್ಚುತ್ತಿರುವ ನಗರೀಕರಣದ ಪರಿಣಾಮವಾಗಿ 2050ರ ವೇಳೆಗೆ ಭಾರತದ ಹಲವು ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಗಣನೀಯವಾಗಿ ಹೆಚ್ಚಾಗಲಿದೆ ಎಂದು ಹೊಸ ಅಧ್ಯಯನವೊಂದು ಎಚ್ಚರಿಸಿದೆ. ಮಳೆಯ ತೀವ್ರತೆ ಹೆಚ್ಚಾಗುವುದು ಮತ್ತು ಗುಡ್ಡ ಪ್ರದೇಶಗಳಲ್ಲಿ ಮಾನವ ಚಟುವಟಿಕೆಗಳ ವಿಸ್ತರಣೆ ಭೂಕುಸಿತದ ಸಾಧ್ಯತೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಈ ಬಗ್ಗೆ Scientific Reports ನಿಯತಕಾಲಿಕೆಯಲ್ಲಿ ಪ್ರಕಟವಾದ ಹೊಸ ಅಧ್ಯಯನವು ಎಚ್ಚರಿಸಿದೆ.

ಅಧ್ಯಯನದ ಪ್ರಕಾರ, ಭವಿಷ್ಯದಲ್ಲಿ ಕೇವಲ ಅತಿವೃಷ್ಟಿಯಷ್ಟೇ ಅಲ್ಲ, ಗುಡ್ಡ ಪ್ರದೇಶಗಳಲ್ಲಿ ಅನಿಯಂತ್ರಿತ ನಗರ ವಿಸ್ತರಣೆ, ರಸ್ತೆ ನಿರ್ಮಾಣ, ಅರಣ್ಯ ನಾಶ ಹಾಗೂ ಭೂಬಳಕೆಯ ಬದಲಾವಣೆಗಳು ಸಹ ಭೂಕುಸಿತದ ಅಪಾಯವನ್ನು ಹೆಚ್ಚಿಸುವ ಪ್ರಮುಖ ಅಂಶಗಳಾಗಿವೆ. ಆದ್ದರಿಂದ ಹವಾಮಾನ ಬದಲಾವಣೆಯ ಜೊತೆಗೆ ಅಭಿವೃದ್ಧಿ ಯೋಜನೆಗಳನ್ನೂ ವೈಜ್ಞಾನಿಕವಾಗಿ ರೂಪಿಸುವ ಅಗತ್ಯವಿದೆ ಎಂದು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಸುಮಾರು 45,000 ಚದರ ಕಿಲೋಮೀಟರ್ ವ್ಯಾಪ್ತಿಯ ಕರ್ನಾಟಕದ ಏಳು ಜಿಲ್ಲೆಗಳನ್ನು ಒಳಗೊಂಡ ಈ ಅಧ್ಯಯನದಲ್ಲಿ ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಮಳೆಪ್ರೇರಿತ 1,200ಕ್ಕೂ ಹೆಚ್ಚು ಭೂಕುಸಿತಗಳು ದಾಖಲಾಗಿರುವ ಪ್ರದೇಶಗಳನ್ನು ವಿಶ್ಲೇಷಿಸಲಾಗಿದೆ. ಸಾಂಪ್ರದಾಯಿಕ ಅಧ್ಯಯನಕ್ಕಿಂತ ವಿಭಿನ್ನ ವಿಧಾನ ಸಾಮಾನ್ಯವಾಗಿ ಭೂಕುಸಿತದ ಅಪಾಯದ ಅಧ್ಯಯನಗಳಲ್ಲಿ ಭೂಕುಸಿತಕ್ಕೆ ಕಾರಣವಾಗುವ ಅಂಶಗಳು ಸ್ಥಿರವಾಗಿರುತ್ತವೆ ಎಂದು ಪರಿಗಣಿಸಲಾಗುತ್ತದೆ. ಪಶ್ಚಿಮ ಘಟ್ಟದ ಭವಿಷ್ಯದ ಭೂಕುಸಿತ ಅಪಾಯವನ್ನು ಈ ರೀತಿಯಲ್ಲಿ ವಿಶ್ಲೇಷಿಸಿದ ಮೊದಲ ಅಧ್ಯಯನಗಳಲ್ಲಿ ಇದೂ ಒಂದಾಗಿದೆ.

ಅಧ್ಯಯನದಲ್ಲಿ ಮಳೆಯ ತೀವ್ರತೆ ಮತ್ತು ನಗರೀಕರಣದ ಮುನ್ಸೂಚನೆಗಳನ್ನು ಒಟ್ಟಿಗೆ ವಿಶ್ಲೇಷಿಸಿ 2050 ರ ಭೂಕುಸಿತ ಅಪಾಯದ ಚಿತ್ರಣ ರೂಪಿಸಲಾಗಿದೆ. ಅದರ ಪ್ರಕಾರ, ಹೆಚ್ಚಿನ ಮಳೆ ಬೀಳುವ ಗುಡ್ಡ ಪ್ರದೇಶಗಳಲ್ಲಿ ಇಂದಿನಗಿಂತ ಹೆಚ್ಚಿನ ಅಪಾಯ ಎದುರಾಗುವ ಸಾಧ್ಯತೆ ಇದೆ.

ಭೂಕುಸಿತದ ಅಪಾಯವನ್ನು ಕಡಿಮೆ ಮಾಡಲು ಅಪಾಯ ವಲಯಗಳ ನಿಖರ ನಕ್ಷೆ ಸಿದ್ಧಪಡಿಸುವುದು, ಮುಂಚಿತ ಎಚ್ಚರಿಕೆ ವ್ಯವಸ್ಥೆ ಬಲಪಡಿಸುವುದು, ನಿರ್ಮಾಣ ಚಟುವಟಿಕೆಗಳಿಗೆ ವೈಜ್ಞಾನಿಕ ನಿಯಮಗಳನ್ನು ಜಾರಿಗೊಳಿಸುವುದು ಮತ್ತು ಭೂಬಳಕೆ ಯೋಜನೆಯಲ್ಲಿ ಭೂಕುಸಿತ ಅಪಾಯವನ್ನು ಕಡ್ಡಾಯವಾಗಿ ಪರಿಗಣಿಸುವುದು ಅಗತ್ಯ ಎಂದು ಅಧ್ಯಯನ ಶಿಫಾರಸು ಮಾಡಿದೆ.

ಪಶ್ಚಿಮ ಘಟ್ಟ, ಹಿಮಾಲಯ ಹಾಗೂ ಈಶಾನ್ಯ ಭಾರತದಂತಹ ಗುಡ್ಡ ಪ್ರದೇಶಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾರಿ ಮಳೆಯಿಂದ ಭೂಕುಸಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಅಧ್ಯಯನವು ವಿಪತ್ತು ನಿರ್ವಹಣೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಮಹತ್ವದ ಮಾರ್ಗದರ್ಶನ ನೀಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

2050 ರ ವೇಳೆಗೆ ಅಪಾಯ ಎಲ್ಲೆಲ್ಲಿ ಹೆಚ್ಚು? : ಅಧ್ಯಯನದ ಪ್ರಕಾರ, 2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣ ಎರಡೂ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಪಶ್ಚಿಮ ಘಟ್ಟದ ಬಹುತೇಕ ಭಾಗಗಳಲ್ಲಿ ಭೂಕುಸಿತದ ಅಪಾಯ ಹೆಚ್ಚಾಗಲಿದೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಸಾರಿಗೆ ಮಾರ್ಗಗಳು,  ಕೊಡಗಿನ ಜನಸಾಂದ್ರತೆಯ ಪ್ರದೇಶಗಳು,  ಚಿಕ್ಕಮಗಳೂರಿನ ಅಭಿವೃದ್ಧಿ ಹೊಂದುತ್ತಿರುವ ಭಾಗಗಳಲ್ಲಿ ಭೂಕುಸಿತದ ಸಂಭವನೀಯತೆ ಮತ್ತು ಅಪಾಯವು ಹೆಚ್ಚು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ಎಚ್ಚರಿಸಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

A new study warns that landslide risk across many parts of India could rise significantly by 2050 due to increasing rainfall intensity and rapid urbanisation. Researchers recommend better hazard mapping, early warning systems, and scientific land-use planning to reduce future disaster risks.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

8 minutes ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

43 minutes ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

2 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

3 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

15 hours ago