350 ಮಿಲಿಯನ್ ಟನ್ ಆಹಾರ ಧಾನ್ಯ ಉತ್ಪಾದನೆ : ರೈತರ ಶ್ರಮಕ್ಕೆ ರಾಷ್ಟ್ರಪತಿ ಶ್ಲಾಘನೆ

January 28, 2026
3:11 PM

ಭಾರತವು ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದು, ಅಕ್ಕಿ ಉತ್ಪಾದನೆಯಲ್ಲಿ ಚೀನಾವನ್ನೂ ಹಿಂದಿಕ್ಕಿ ವಿಶ್ವದ ಅತಿದೊಡ್ಡ ಅಕ್ಕಿ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಭಾಷಣದಲ್ಲಿ ಹೇಳಿದರು.

ಸಂಸತ್ತಿನ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಭಾರತೀಯ ರೈತರ ಕಠಿಣ ಪರಿಶ್ರಮ ಹಾಗೂ ಕೃಷಿಯ ಮಹತ್ವವನ್ನು ಹಾಗೂ ವಿಶೇಷವಾಗಿ ದೇಶದ ಕೃಷಿ, ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾಧಿಸಿದ ಗಮನಾರ್ಹ ಬೆಳವಣಿಗೆಯನ್ನು ವಿವರಿಸಿದರು.

ದಾಖಲೆಯ ಆಹಾರ ಧಾನ್ಯ ಉತ್ಪಾದನೆ :  ಕಳೆದ ವರ್ಷ ದೇಶವು ದಾಖಲೆಯ ಮಟ್ಟದಲ್ಲಿ ಆಹಾರ ಧಾನ್ಯ ಉತ್ಪಾದನೆ ಸಾಧಿಸಿದೆ ಎಂದು ತಿಳಿಸಿದ ರಾಷ್ಟ್ರಪತಿ, ಭಾರತವು 350 ಮಿಲಿಯನ್ ಟನ್ ಆಹಾರ ಧಾನ್ಯಗಳನ್ನು ಉತ್ಪಾದಿಸಿದೆ ಎಂದರು. ಇದರಲ್ಲಿ 150 ಮಿಲಿಯನ್ ಟನ್ ಅಕ್ಕಿ ಉತ್ಪಾದನೆಯೊಂದಿಗೆ ಭಾರತವು ಈಗ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಚೀನಾವನ್ನೂ ಮೀರಿಸಿದೆ ಎಂದು ಹೇಳಿದರು.

ರೈತರ ಶ್ರಮವೇ ದೇಶಕ್ಕೆ ಶಕ್ತಿ : “ರೈತರ ಶ್ರಮ ಇಂದು ದೇಶಕ್ಕೂ ಜಗತ್ತಿಗೂ ಅನ್ನ ನೀಡುತ್ತಿದೆ. ಭಾರತದ ಕೃಷಿಯ ಯಶಸ್ಸು ವಿಶ್ವದ ಹಸಿವು ನೀಗಿಸುವಲ್ಲಿ ದೊಡ್ಡ ಪಾತ್ರ ವಹಿಸುತ್ತಿದೆ,” ಎಂದ ಅವರು ಮೀನು ಉತ್ಪಾದನೆಯಲ್ಲಿ ಭಾರತದ ಮತ್ತೊಂದು ಹೆಮ್ಮೆಯ ಸಾಧನೆ ಮಾಡಿದೆ. ಭಾರತವು ಕೃಷಿಯ ಜೊತೆಗೆ ಮೀನುಗಾರಿಕೆ ಕ್ಷೇತ್ರದಲ್ಲಿಯೂ ಮಹತ್ವದ ಸಾಧನೆ ಮಾಡಿದೆ ಎಂದು ರಾಷ್ಟ್ರಪತಿಗಳು ವಿವರಿಸಿದರು.

ಹಾಲು ಮತ್ತು ಉತ್ಪಾದನಾ ಕ್ಷೇತ್ರದಲ್ಲಿಯೂ ಭಾರತ ಮುನ್ನಡೆ ಸಾಧಿಸಿದ್ದು, ಭಾರತವು ಹಾಲು ಉತ್ಪಾದನೆಯಲ್ಲಿ ವಿಶ್ವದ ಅತ್ಯಂತ ಯಶಸ್ವಿ ರಾಷ್ಟ್ರಗಳಲ್ಲಿ ಒಂದಾಗಿದೆ . ಸಹಕಾರಿ ಚಳುವಳಿಯ ಬಲವೇ ಈ ಯಶಸ್ಸಿಗೆ ಕಾರಣ ಎಂದು ಅಭಿಪ್ರಾಯಪಟ್ಟರು.

ಆಯುಷ್ಮಾನ್ ಭಾರತ್ ಯೋಜನೆಯಡಿ ದೇಶದಲ್ಲಿ 100 ಕೋಟಿ ಜನರು ಉಚಿತ ಚಿಕಿತ್ಸಾ ಸೌಲಭ್ಯ ಪಡೆದಿದ್ದಾರೆ ಎಂದು ರಾಷ್ಟ್ರಪತಿ ಹೇಳಿದರು.  ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಲು ಆಸ್ಪತ್ರೆಗಳು, ವೈದ್ಯಕೀಯ ಮೂಲಸೌಕರ್ಯ ಮತ್ತು ಆರೋಗ್ಯ ವಿಮೆ ಯೋಜನೆಗಳು ವಿಸ್ತರಿಸಲಾಗುತ್ತಿವೆ ಎಂದು ತಿಳಿಸಿದರು.

ಗ್ರಾಮೀಣ ಮತ್ತು ಮೂಲಸೌಕರ್ಯ ಅಭಿವೃದ್ಧಿ:  ಗ್ರಾಮೀಣ ಭಾರತವನ್ನು ಅಭಿವೃದ್ಧಿ ಹೊಂದಿದ ಭಾರತವಾಗಿಸಲು ಸರ್ಕಾರವು ಮೂಲಸೌಕರ್ಯ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದೆ.  ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕಳೆದ ವರ್ಷದಲ್ಲಿ ಮಾತ್ರವೇ ಸುಮಾರು 18,000 ಕಿ.ಮೀ. ಹೊಸ ಗ್ರಾಮೀಣ ರಸ್ತೆ ನಿರ್ಮಾಣವಾಗಿದೆ ಎಂದು ರಾಷ್ಟ್ರಪತಿ ಹೇಳಿದರು.

 ಬಡವರಿಗಾಗಿ ವಸತಿ ಮತ್ತು ನೀರಿನ ಯೋಜನೆಗಳು :  ಕಳೆದ ದಶಕದಲ್ಲಿ ಬಡವರಿಗಾಗಿ 4 ಕೋಟಿ ಪಕ್ಕಾ ಮನೆಗಳು ನಿರ್ಮಿಸಲ್ಪಟ್ಟಿದ್ದು, ಕಳೆದ ವರ್ಷ ಮಾತ್ರವೇ 32 ಲಕ್ಷ ಹೊಸ ಮನೆಗಳು ಒದಗಿಸಲಾಗಿದೆ ಎಂದು ಮುರ್ಮು ಮಾಹಿತಿ ನೀಡಿದರು. ಜಲ ಜೀವನ್ ಮಿಷನ್ ಮೂಲಕ ಕೋಟ್ಯಂತರ ಕುಟುಂಬಗಳಿಗೆ ಪೈಪ್ ನೀರಿನ ಸೌಲಭ್ಯ ದೊರೆತಿದ್ದು, ಗ್ರಾಮೀಣ ಬದುಕಿನಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ ಎಂದರು.

ಭಾರತ ಜಾಗತಿಕ ಅಭಿವೃದ್ಧಿಯತ್ತ ವೇಗ :  ಕೃಷಿ, ಮೀನುಗಾರಿಕೆ, ಆರೋಗ್ಯ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾಧಿಸಿರುವ ಈ ದಾಖಲೆ ಬೆಳವಣಿಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿಸಲು ಸಹಕಾರಿಯಾಗಿದೆ ಎಂದು ರಾಷ್ಟ್ರಪತಿ ಮುರ್ಮು ಅಭಿಪ್ರಾಯಪಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror