MIRROR FOCUS

#GDP2023 | ಚೀನಾವನ್ನು ಮತ್ತೆ ಹಿಂದಿಕ್ಕಿದ ಭಾರತ | ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಭಾರತ | 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸುವ ಸಾಧ್ಯತೆ |

Share

ಒಂದು ದೇಶದ ಆರ್ಥಿಕ ಪರಿಸ್ಥಿತಿಯನ್ನು ಜಿಡಿಪಿ#GDP ಮೂಲಕ ಅಳೆಯಲಾಗುತ್ತದೆ. ವಿಶ್ವದಾದ್ಯಂತ ಹಲವು ಅನಿಶ್ಚಿತೆಗಳ ಮಧ್ಯೆಯೂ 2023-24ರ ಹಣಕಾಸು ವರ್ಷದ ಒಟ್ಟು ರಾಷ್ಟ್ರೀಯ ಉತ್ಪನ್ನದಲ್ಲಿ ಭಾರತ ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿ #Economicdevelopmentಗೆ ದಾಖಲಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ #IMF ಮಾಹಿತಿ ನೀಡಿದೆ.

Advertisement

ಐಎಂಎಫ್‌  ಜಿಡಿಪಿ ಮುನ್ನೋಟವನ್ನು ಬಿಡುಗಡೆ ಮಾಡಿದೆ. 2023ರಲ್ಲಿ ಭಾರತದ ಜಿಡಿಪಿ ದರ 6.3% ಇದ್ದರೆ 2024ರಲ್ಲಿ 6.3% ದಾಖಲಿಸಬಹುದು ಎಂದು ಭವಿಷ್ಯ ನುಡಿದಿದೆ. ಈ ಹಿಂದೆ 2023-24ರ ಹಣಕಾಸು ವರ್ಷದಲ್ಲಿ ಭಾರತ 6.1% ಜಿಡಿಪಿ ದಾಖಲಿಸಬಹುದು ಎಂದಿದ್ದ ಐಎಂಎಫ್‌ ಈಗ 20 ಬೇಸಿಸ್‌ ಪಾಯಿಂಟ್‌  ಏರಿಕೆ ಮಾಡಿ ವರದಿ ಬಿಡುಗಡೆ ಮಾಡಿದೆ.

 

ಭಾರತದ ಆರ್‌ಬಿಐ ಈ ಹಣಕಾಸು ವರ್ಷದಲ್ಲಿ 6.5% ಜಿಡಿಪಿ ದಾಖಲಿಸಬಹುದು ಎಂದು ಅಂದಾಜಿಸಿದೆ.  ಇದೇ ಜಿಡಿಪಿ ಪ್ರಗತಿಯನ್ನು ಕಾಯ್ದುಕೊಂಡರೆ 2026ರಲ್ಲಿ ಜಪಾನ್‌, 2027ರಲ್ಲಿ ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಬಹುದು ಎಂದು ಐಎಂಫ್‌ ಭವಿಷ್ಯ ನುಡಿದಿದೆ.  2021ರ ಹಣಕಾಸು ವರ್ಷದ ಕೊನೆಯ ಮೂರು ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿತ್ತು. ಚೀನಾದ ಜಿಡಿಪಿ ಬೆಳವಣಿಗೆ ದರವನ್ನು ಐಎಂಫ್‌ ಇಳಿಕೆ ಮಾಡಿದೆ. ಈ ಹಿಂದೆ 5.2% ಎಂದಿದ್ದ ಐಎಂಫ್‌ ಈಗ ದರವನ್ನು 5% ಇಳಿಸಿದೆ. ರಿಯಲ್‌ ಎಸ್ಟೇಟ್‌ ಕುಸಿತಗೊಂಡ ಹಿನ್ನೆಲೆಯಲ್ಲಿ ದರವನ್ನು ಇಳಿಕೆ ಮಾಡಿದೆ. 2024ರಲ್ಲಿ 4.2% ಜಿಡಿಪಿ ದಾಖಲಿಸಬಹುದು ಎಂದು ಹೇಳಿದೆ.

2023ರಲ್ಲಿ ಯಾವ ದೇಶದ ಜಿಡಿಪಿ ಎಷ್ಟು?: ಅಮೆರಿಕ 3%, ಜರ್ಮನಿ -0.5%, ಫ್ರಾನ್ಸ್‌ 1.0% ಜಪಾನ್‌ 2.0%, ಕೆನಡಾ 1.3% ಬ್ರೆಜಿಲ್‌ 3.1% ಜಿಡಿಪಿ ಪ್ರಗತಿ ಸಾಧಿಸಲಿದೆ ಎಂದು ಐಎಂಎಫ್‌ ಅಂದಾಜಿಸಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

20 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

21 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

21 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

21 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

22 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

22 hours ago