ವಾಹನ ಉದ್ಯಮ ಕ್ಷೇತ್ರದಲ್ಲಿ ಭಾರತ ಕ್ಷಿಪ್ರ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ವಾಹನ ಉದ್ಯಮ ಕ್ಷೇತ್ರವು ಜಪಾನ್ ಅನ್ನೂ ಮೀರಿಸಿ 7ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಏರಿದೆ. ಅರೆವಾಹಕ ಕ್ಷೇತ್ರದಲ್ಲಿಯೂ ದಾಪುಗಾಲು ಇಡುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದರು.
ಭಾರತೀಯ ವಾಹನ ಉದ್ಯಮ ತಯಾರಕರ ಸಂಘದ ವತಿಯಿಂದ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತೀಯ ವಾಹನ ಉದ್ಯಮದ ಗಾತ್ರವು ಪ್ರಸ್ತುತ 22 ಲಕ್ಷ ಕೋಟಿ ರೂಪಾಯಿಗಳಷ್ಟಿದ್ದು, ಈ ಪೈಕಿ ವಾಹನ ಘಟಕಗಳು 5.18 ಲಕ್ಷ ಕೋಟಿ ರೂಪಾಯಿಗಳ ಕೊಡುಗೆ ನೀಡುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಶೇಕಡಾ 9ರಷ್ಟು ಬೆಳವಣಿಗೆ ಕಂಡಿದೆ ಎಂದರು.ವಾಹನ ಉದ್ಯಮದಲ್ಲಿ ಆಮದಿನ ಪ್ರಮಾಣ 1.68 ಲಕ್ಷ ಕೋಟಿ ರೂಪಾಯಿ ಇದ್ದು, ರಫ್ತು ವ್ಯವಹಾರ 1.76 ಲಕ್ಷ ಕೋಟಿಯಾಗಿದೆ. ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಇದೇ ರೀತಿ ಮುಂದುವರೆದರೆ ಭಾರತವು ತನ್ನ ಮಾರುಕಟ್ಟೆಗಾಗಿ ಅರೆವಾಹಕ ಚಿಪ್ಗಳನ್ನು ತಯಾರಿಸಲು ಸಾಧ್ಯವಾಗುತ್ತದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದರು
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…