Advertisement
MIRROR FOCUS

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

Share

ಸರ್ಕಾರದ ಕೃಷಿ ನೀತಿಯ ಪರಿಣಾಮವಾಗಿ ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದಾಖಲೆ ಮಟ್ಟದ ಆಹಾರಧಾನ್ಯ ಉತ್ಪಾದನೆ ಸಾಧಿಸಲಾಗಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಗೆ ತಿಳಿಸಿದ್ದಾರೆ.

ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ದೇಶದಲ್ಲಿ ಒಟ್ಟು 357 ದಶಲಕ್ಷ ಟನ್ ಆಹಾರಧಾನ್ಯ ಉತ್ಪಾದನೆ ಸಾಧನೆಯಾಗಿದ್ದು, ಇದು ಹೊಸ ದಾಖಲೆಯಾಗಿದೆ ಎಂದು ಹೇಳಿದರು.

ಭತ್ತ ಉತ್ಪಾದನೆಯಲ್ಲಿ ಭಾರತ ಮಹತ್ವದ ಸಾಧನೆ ಮಾಡಿದ್ದು, 15 ಕೋಟಿ ಟನ್ ಭತ್ತ ಉತ್ಪಾದನೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ಜಾಗತಿಕ ಅಗ್ರಸ್ಥಾನಕ್ಕೇರಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಧನಧಾನ್ಯ ಯೋಜನೆಯ ಪರಿಣಾಮಕಾರಿ ಅನುಷ್ಠಾನದಿಂದಾಗಿ ಭತ್ತ ಮಾತ್ರವಲ್ಲದೆ ಬೇಳೆಕಾಳು, ಎಣ್ಣೆಬೀಜ, ಸೋಯಾಬಿನ್ ಸೇರಿದಂತೆ ಹಲವು ಬೆಳೆಗಳ ಉತ್ಪಾದನೆ ಹೆಚ್ಚಳವಾಗಿದೆ ಎಂದು ಸಚಿವರು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಆಹಾರಧಾನ್ಯ ಉತ್ಪಾದನೆ 46 ಶೇಕಡಕ್ಕಿಂತ ಹೆಚ್ಚು ಏರಿಕೆ ಕಂಡಿದ್ದು, ದೇಶದ ಆಹಾರದ ಭಂಡಾರಗಳು ಸಮೃದ್ಧವಾಗಿವೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿ ಅಭಿವೃದ್ಧಿಗೆ ಮೂರು ಮುಖ್ಯ ಗುರಿಗಳು :  ಕೃಷಿಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಮೂರು ಪ್ರಮುಖ ಗುರಿಗಳನ್ನು ಹೊಂದಿದೆ ಎಂದು ಸಚಿವರು ಹೇಳಿದರು.

  • ಆಹಾರ ಭದ್ರತೆ

  • ರೈತರ ಹಿತರಕ್ಷಣೆ

  • ಪೌಷ್ಟಿಕ ಆಹಾರ ಒದಗಿಸುವುದು

ಈ ಗುರಿಗಳನ್ನು ಸಾಧಿಸಲು ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ರೈತರಿಗೆ ವಿಶೇಷ ಗುರುತಿನ ಚೀಟಿ :  ದೇಶದ ರೈತರಿಗೆ ಪ್ರತ್ಯೇಕ ರೈತರ ಗುರುತಿನ ಚೀಟಿ ನೀಡುವ ಕಾರ್ಯ ನಡೆಯುತ್ತಿದ್ದು, ಈ ಚೀಟಿಯಲ್ಲಿ

  • ಕೃಷಿ ಜಮೀನಿನ ವಿಸ್ತೀರ್ಣ

  • ಕುಟುಂಬ ಸದಸ್ಯರ ವಿವರ

  • ಬೆಳೆ ಮಾಹಿತಿ

ಹಾಗೂ ರೈತರಿಗೆ ಸಂಬಂಧಿಸಿದ ಇತರ ಮಾಹಿತಿಗಳು ಸೇರಿಸಲ್ಪಡಲಿವೆ ಎಂದು ತಿಳಿಸಿದರು.

ರೈತರಿಗೆ ಸಹಾಯಧನ :  ರೈತರಿಗೆ ಒಟ್ಟು 1 ಲಕ್ಷ 86 ಸಾವಿರ ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಯಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಕೃಷಿ ಉತ್ಪಾದನೆಯಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಉತ್ಪಾದನೆಯಿರುವ ಜಿಲ್ಲೆಗಳಲ್ಲಿ ವಿಶೇಷ ಯೋಜನೆ ಜಾರಿಗೊಳಿಸಲಾಗಿದೆ. ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಲ್ಲಿದ್ದು, 96 ಜಿಲ್ಲೆಗಳು ಉತ್ತಮ ಪ್ರಗತಿ ಸಾಧಿಸಿವೆ ಎಂದು ಸಚಿವರು ತಿಳಿಸಿದರು.

ಆದರೆ ಪಶ್ಚಿಮ ಬಂಗಾಳ ಸರ್ಕಾರದ ಅಸಹಕಾರದಿಂದಾಗಿ ನಾಲ್ಕು ಜಿಲ್ಲೆಗಳು ಈ ಯೋಜನೆಯಿಂದ ವಂಚಿತವಾಗಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

India has achieved a record 357 million tonnes of food grain production in the last ten years under the NDA government’s agricultural policies, Agriculture Minister Shivraj Singh Chouhan told the Lok Sabha. He also said India has overtaken China in rice production with 150 million tonnes, while several government schemes have boosted production of pulses, oilseeds, and other crops.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

4 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

10 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

10 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago