ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

May 27, 2026
8:51 PM
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು ದೇಶದ ಇತಿಹಾಸದಲ್ಲೇ ಅತಿದೊಡ್ಡ ದಾಖಲೆಯಾಗಿದೆ. ಕಳೆದ ವರ್ಷದಿಗಿಂತ ಸುಮಾರು 188 ಲಕ್ಷ ಟನ್ ಹೆಚ್ಚಳ ಕಂಡಿದೆ.

ಕೇಂದ್ರ ಸರ್ಕಾರ ರೈತರ ಸಮೃದ್ಧಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದರ ಪರಿಣಾಮವಾಗಿ ದೇಶದಲ್ಲಿ ದಾಖಲೆಯ ಮಟ್ಟದ ಕೃಷಿ ಉತ್ಪಾದನೆ ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

2025-26ನೇ ಸಾಲಿನ ಪ್ರಮುಖ ಕೃಷಿ ಬೆಳೆಗಳ ಮೂರನೇ ಮುಂಗಡ ಅಂದಾಜುಪಟ್ಟಿ ಬಿಡುಗಡೆ ಮಾಡಿದ ಸಚಿವರು, ದೇಶದ ಒಟ್ಟು ಆಹಾರ ಉತ್ಪಾದನೆ 3765.63 ಲಕ್ಷ ಟನ್‌ಗಳಿಗೆ ತಲುಪುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಇದು ಕಳೆದ ವರ್ಷದ 3577.32 ಲಕ್ಷ ಟನ್ ಉತ್ಪಾದನೆಗಿಂತ ಸುಮಾರು 188 ಲಕ್ಷ ಟನ್ ಹೆಚ್ಚಾಗಿದ್ದು, ಭಾರತದ ಇತಿಹಾಸದಲ್ಲೇ ಇದುವರೆಗೆ ಕಂಡಿರದ ಅತ್ಯಧಿಕ ಆಹಾರ ಉತ್ಪಾದನೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಿವಿಧ ಕೃಷಿ ಯೋಜನೆಗಳು, ತಂತ್ರಜ್ಞಾನ ಆಧಾರಿತ ಕೃಷಿ ಪದ್ಧತಿಗಳು, ನೀರಾವರಿ ವಿಸ್ತರಣೆ, ಉತ್ತಮ ಗುಣಮಟ್ಟದ ಬೀಜ ಬಳಕೆ ಹಾಗೂ ರೈತಪರ ನೀತಿಗಳಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ ಎಂದು ಸಚಿವರು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದೇಶದ ಆಹಾರ ಭದ್ರತೆ ಬಲಪಡಿಸುವುದರ ಜೊತೆಗೆ ರೈತರ ಆದಾಯ ಹೆಚ್ಚಿಸುವ ದಿಕ್ಕಿನಲ್ಲಿ ಈ ದಾಖಲೆ ಉತ್ಪಾದನೆ ಮಹತ್ವದ ಹೆಜ್ಜೆಯಾಗಿದೆ. ಕೃಷಿ ಉತ್ಪಾದನೆಯ ಏರಿಕೆಯಿಂದ ದೇಶೀಯ ಮಾರುಕಟ್ಟೆ ಸ್ಥಿರತೆಗೂ ಸಹಾಯವಾಗುವ ಸಾಧ್ಯತೆ ಇದೆ.

India is set to achieve a record foodgrain production of 3765.63 million tonnes in 2025-26, according to the third advance estimates released by Union Agriculture Minister Shivraj Singh Chouhan. The production is around 188 million tonnes higher than last year, marking the highest-ever agricultural output in the country’s history.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror