ಕೋವಿಡ್-19: ದೇಶದಾದ್ಯಂತ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆ

April 13, 2023
12:29 PM

ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಸದ್ಯ ದೇಶದಲ್ಲಿ 44,998 ಸಕ್ರಿಯ ಪ್ರಕರಣಗಳಿದ್ದು, ಬುಧವಾರ 7,830 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.

ದೈನಂದಿನ ಪಾಸಿಟಿವಿಟಿ ದರ ಶೇ 4.42ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.02ರಷ್ಟಿದೆ. ಇದೇ ವೇಳೆ ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದ್ದರೆ, ದೇಶದಾದ್ಯಂತ ಈವರೆಗೆ 4,42,10,127 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror