ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಸದ್ಯ ದೇಶದಲ್ಲಿ 44,998 ಸಕ್ರಿಯ ಪ್ರಕರಣಗಳಿದ್ದು, ಬುಧವಾರ 7,830 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.
ದೈನಂದಿನ ಪಾಸಿಟಿವಿಟಿ ದರ ಶೇ 4.42ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.02ರಷ್ಟಿದೆ. ಇದೇ ವೇಳೆ ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದ್ದರೆ, ದೇಶದಾದ್ಯಂತ ಈವರೆಗೆ 4,42,10,127 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?