Advertisement
MIRROR FOCUS

ದೇಶದ ಪ್ರಗತಿಗೆ ಕೃಷಿ ಸಾಮರ್ಥ್ಯವೇ ಆಧಾರ – ರೈತರ ಹಕ್ಕುಗಳಲ್ಲಿ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ – ಪ್ರಧಾನಿ ನರೇಂದ್ರ ಮೋದಿ

Share

ದೇಶವು ರೈತರ ಹಿತಾಸಕ್ತಿಯೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು, ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಕೃಷಿ ವೆಚ್ಚಗಳನ್ನು ತಗ್ಗಿಸಲು ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆಹಾರ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿಸುವ ಆಂದೋಲನವನ್ನು ಡಾ. ಸ್ವಾಮಿನಾಥನ್ ಅವರು ಮುನ್ನಡೆಸಿದ್ದರು. ಅವರ ಆಲೋಚನೆಗಳು ಭಾರತದ ಕೃಷಿ ವಲಯದಲ್ಲಿ ಇಂದಿಗೂ ಪ್ರಸ್ತುತವಾಗಿದ್ದು, ಅವುಗಳನ್ನು ಆಧರಿಸಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸುತ್ತಿದೆ ಎಂದರು. ರೈತರು, ಪಶುಪಾಲಕರು, ಮೀನುಗಾರರು, ಹೈನುಗಾರರು ಸೇರಿದಂತೆ ಎಲ್ಲಾ ಕೃಷಿ ಪೂರಕ ವರ್ಗದವರ ಹಿತ ಕಾಯುವುದು ತಮ್ಮ ಸರ್ಕಾರದ ಮೊದಲ  ಆದ್ಯತೆಯಾಗಿದೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿದರು. ದೇಶದ ಪ್ರಗತಿಗೆ ಕೃಷಿ ಸಾಮರ್ಥ್ಯವೇ ಆಧಾರ. ನಮ್ಮ ರೈತರ ಬಳಿ ಪಾರಂಪರಿಕ ಕೃಷಿಯ ಜ್ಞಾನ ಭಂಡಾರವಿದ್ದು, ಅದನ್ನು ಬಳಸಿಕೊಂಡು ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು ನೀಡುವ ತುರ್ತು ಅಗತ್ಯವಿದೆ. ಆಹಾರ ಭದ್ರತೆ ಜೊತೆಗೆ ಪೌಷ್ಠಿಕ ಭದ್ರತೆಗೂ ಒತ್ತು ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಕಾರ್ಯೋನ್ಮುಖವಾಗಿ ಇದೀಗ ಎಲ್ಲಾ ಹವಾಮಾನಗಳನ್ನು ಎದುರಿಸುವಂತಹ ಸಾಮರ್ಥ್ಯವಿರುವ ತಳಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ರೈತರು ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.    ಪ್ರೊ. ಎಂ.ಎಸ್. ಸ್ವಾಮಿನಾಥನ್ ಅವರನ್ನು ತಾವು ಭೇಟಿಯಾಗಿದ್ದು, ಅದೊಂದು ಅಮೂಲ್ಯವಾದ ಕಲಿಕಾ ಅನುಭವವಾಗಿತ್ತು. ಕೃಷಿ ವಿಜ್ಞಾನದಲ್ಲಿ ಅವರ ಪರಿವರ್ತನಾತ್ಮಕ ಕಾರ್ಯವನ್ನು ಇಂದಿಗೂ ವ್ಯಾಪಕವಾಗಿ ಮೆಚ್ಚಲಾಗುತ್ತಿದೆ. ಅಂತಹ ಸಾಧಕರನ್ನು ಭಾರತರತ್ನದೊಂದಿಗೆ ಗೌರವಿಸುವ ಅವಕಾಶ ನಮ್ಮ ಸರ್ಕಾರಕ್ಕೆ ಸಿಕ್ಕಿದೆ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

9 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

9 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

18 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

18 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

19 hours ago