Advertisement
MIRROR FOCUS

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

Share

ಭಾರತೀಯ ಸೇನಾ ಪಡೆಗಳು ನಡೆಸಿದ ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಬದಲಾಗಿ ಅದು ದೇಶದ ಜನರ ಸಾಮೂಹಿಕ ಭಾವನೆಗಳು ಮತ್ತು ವಿರೋಧದ ಪ್ರಬಲ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ.…..ಮುಂದೆ ಓದಿ….

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ಸಶಸ್ತ್ರ ಪಡೆಗಳು, ಮಿಲಿಟರಿ, ಗುಪ್ತಚರ ಸಂಸ್ಥೆಗಳು ಮತ್ತು ವಿಜ್ಞಾನಿಗಳಿಗೆ ಆಪರೇಷನ್ ಸಿಂದೂರ್ ಕಾರ್ಯದಲ್ಲಿ ಯಶಸ್ಸು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಭಾರತವು  ಬೃಹತ್ ಪ್ರಮಾಣದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಪಡಿಸಿದೆ. ಆದ್ದರಿಂದ, ಯಾವುದೇ ಭಯೋತ್ಪಾದನೆ ನಿಗ್ರಹ ಮಾಡಲು ಭಾರತ ಹಿಂಜರಿಯುವುದಿಲ್ಲ, ಭಯೋತ್ಪಾದನೆ ನಿಗ್ರಹಕ್ಕೆ ನಮ್ಮ ಆಪರೇಷನ್ ಸಿಂದೂರ್ ಮುಂದುವರಿಯುತ್ತದೆ ಎಂದರು.ಸದ್ಯ  ಕಾರ್ಯಾಚರಣೆಯು ಸ್ಥಗಿತಗೊಂಡಿರುವುದರಿಂದ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಜಾಗರೂಕರಾಗಿರುವ ಈಗ ನೀಡಿರುವ  ಭರವಸೆಗಳೊಂದಿಗೆ ಭಾರತವು ಪಾಕಿಸ್ತಾನದ ಕ್ರಮಗಳನ್ನು ಗಮನಿಸುತ್ತದೆ, ತಂಟೆಗೆ ಬಂದರೆ ಸುಮ್ಮನೆ ಇರುವುದಿಲ್ಲ ಎಂದರು. ಭಾರತವು ಭಯೋತ್ಪಾದನೆಗೆ ಪ್ರತಿಕ್ರಿಯಿಸುತ್ತದೆ, ಆದರೆ ಪರಮಾಣು ಬ್ಲ್ಯಾಕ್‌ಮೇಲ್ ಅನ್ನು ಸಹಿಸುವುದಿಲ್ಲ, ಭಯೋತ್ಪಾದನೆಯ ನಿಗ್ರಹಕ್ಕೆ ಭಾರತವು ದಾಳಿ ಮಾಡುತ್ತದೆ ಮತ್ತು ಭಯೋತ್ಪಾದಕ ಮುಖ್ಯಸ್ಥರು ಮತ್ತು ಅವರ ಬೆಂಬಲಿಗರನ್ನು ಕೂಡಾ ಮುಗಿಸಲು ಹಿಂದೇಟು ಹಾಕುವುದಿಲ್ಲ ಎಂದರು.

ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆಗಳನ್ನು ನಾಶಪಡಿಸಬೇಕು ಇಲ್ಲದಿದ್ದರೆ ಅವರಿಗೆ ಯಾವುದೇ ಅನ್ಯ ಮಾರ್ಗವಿಲ್ಲ ಎಂದು  ಮೋದಿ ಹೇಳಿದರು. ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ ಇರುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದರು. ಭಯೋತ್ಪಾದನೆ, ವ್ಯಾಪಾರ ಮತ್ತು ಮಾತುಕತೆಗಳನ್ನು ಒಟ್ಟಿಗೆ ಮಾಡಲು ಸಾಧ್ಯವಿಲ್ಲ ಎಂಬುದು ಭಾರತದ ನಿಲುವು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. ಪಾಕಿಸ್ತಾನ ಸೇನೆ ಮತ್ತು ಪಾಕಿಸ್ತಾನ ಸರ್ಕಾರವು ಭಯೋತ್ಪಾದನೆಯನ್ನು ಪೋಷಿಸುವುದನ್ನು ಮುಂದುವರಿಸಿದರೆ, ಒಂದು ದಿನ ಅದು ಪಾಕಿಸ್ತಾನದ ಸ್ವಂತ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

14 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago