ಕ್ರೀಡೆಯಲ್ಲಿ ಭಾರತ (Bharat) ಇತ್ತೀಚೆಗೆ ಮಹತ್ತರ ಸಾಧನೆಗಳನ್ನು ಮಾಡುತ್ತಿದೆ. ಸದ್ಯ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ (Asian Games) ಭಾರತ ತನ್ನ ಮೊದಲ ಚಿನ್ನದ ಪದಕವ (Gold medal) ಗೆದ್ದುಕೊಂಡಿದ್ದು, ಶೂಟಿಂಗ್ ನಲ್ಲಿ ಭಾರತಕ್ಕೆ ಈ ಚಿನ್ನದ ಪದಕ ಲಭಿಸಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪವಾರ್, ರುದ್ರಂಕ್ಷ್ ಬಾಳಾಸಾಹೇಬ್ ಮತ್ತು ಐಶ್ವರ್ಯ ತೋಮರ್ ಅವರು ವಿಶ್ವದಾಖಲೆ ನಿರ್ಮಿಸಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.
ಶೂಟಿಂಗ್ ಹೊರತಾಗಿ ಎರಡನೇ ದಿನವೂ ಭಾರತ ರೋಯಿಂಗ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದೆ. 19ನೇ ಏಷ್ಯನ್ ಗೇಮ್ಸ್ನ ಮೊದಲ ದಿನ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತ ತನ್ನ ಅಭಿಯಾನವನ್ನು ಆರಂಭಿಸಿತ್ತು. ಶೂಟಿಂಗ್‌ನಲ್ಲಿ ಮಹಿಳಾ ತಂಡ ವಿಭಾಗದಲ್ಲಿ ಭಾರತ ಆ ಪದಕ ಗೆದ್ದಿತ್ತು. ಮೊದಲ ದಿನ 3 ಬೆಳ್ಳಿ ಹಾಗೂ 2 ಕಂಚು ಗೆದ್ದಿರುವ ಭಾರತ ಎರಡನೇ ದಿನವನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಆರಂಭಿಸಿದೆ.
ವಿಶ್ವ ದಾಖಲೆ ಮುರಿದು ಚಿನ್ನ ಗೆದ್ದ ಭಾರತ ಇನ್ನು ಎರಡನೇ ದಿನವನ್ನು ಚಿನ್ನದ ಪದಕದೊಂದಿಗೆ ಆರಂಭಿಸಿರುವ ಭಾರತದ ಶೂಟರ್‌ಗಳು ಈ ಚಿನ್ನದ ಪದಕದೊಂದಿಗೆ ವಿಶ್ವ ದಾಖಲೆಯನ್ನೂ ಮುರಿದಿದ್ದಾರೆ. ಪುರುಷರ 10 ಮೀಟರ್ ಏರ್ ರೈಫಲ್‌ನ ಟೀಮ್ ಈವೆಂಟ್‌ನಲ್ಲಿ, ಭಾರತದ ಮೂವರು ಶೂಟರ್‌ಗಳಾದ ದಿವ್ಯಾಂಶ್ ಸಿಂಗ್ ಪವಾರ್, ರುದ್ರಂಕ್ಷ್ ಬಾಳಾಸಾಹೇಬ್ ಮತ್ತು ಐಶ್ವರ್ಯ ತೋಮರ್ ಸಂಯೋಜಿತ ಸ್ಕೋರ್‌ನೊಂದಿಗೆ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.
ಈ ಮೂವರೂ ಸೇರಿ 1893.7 ಅಂಕಗಳನ್ನು ಕಲೆಹಾಕಿದ್ದು, ಇದು ಈಗ ಹೊಸ ವಿಶ್ವ ದಾಖಲೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆಯು 1893.3 ಪಾಯಿಂಟ್‌ಗಳಾಗಿದ್ದು, ಇದನ್ನು ಚೀನಾ ಮಾಡಿತ್ತು. ಭಾರತದ ಮೂವರು ಶೂಟರ್‌ಗಳ ಪೈಕಿ ರುದ್ರಂಕ್ಷ್ ಬಾಳಾಸಾಹೇಬ್ ಅವರು 632.5 ಅಂಕಗಳನ್ನು ಗಳಿಸಿದರು. ಇವರಲ್ಲದೆ ಐಶ್ವರ್ಯಾ ತೋಮರ್ 631.6 ಅಂಕ ಗಳಿಸಿದರೆ, ದಿವ್ಯಾನ್ಶ್ ಪವಾರ್ 629.6 ಅಂಕ ಗಳಿಸಿದರು.
ರೋಯಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ಕಂಚು ಶೂಟಿಂಗ್‌ನಲ್ಲಿ ವಿಶ್ವದಾಖಲೆ ಜತೆಗೆ ಚಿನ್ನ ಗೆದ್ದ ಭಾರತ ಎರಡನೇ ದಿನವೂ ಕಂಚಿನ ಪದಕದ ಬೇಟೆಯಾಡಿದೆ. ರೋಯಿಂಗ್‌ನಲ್ಲಿ ಭಾರತಕ್ಕೆ ಈ ಕಂಚಿನ ಪದಕ ಲಭಿಸಿದೆ. ಇಲ್ಲಿ ಪುರುಷರ ನಾಲ್ಕರ ವಿಭಾಗದ ಫೈನಲ್‌ನಲ್ಲಿ ಜಸ್ವಿಂದರ್, ಭೀಮ್, ಪುನಿತ್ ಮತ್ತು ಆಶಿಶ್ 6:10.81 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಭಾರತಕ್ಕೆ ಕಂಚಿನ ಪದಕ ತಂದುಕೊಟ್ಟರು.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…