ಕರಾವಳಿ ಕಾವಲು ಪಡೆ ದಾಳಿ | ಅಡಿಕೆ ತುಂಬಿದ್ದ ಮೀನುಗಾರಿಕಾ ದೋಣಿ ವಶಕ್ಕೆ

January 24, 2026
1:29 PM

ಪಶ್ಚಿಮ ಬಂಗಾಳದ ಫ್ರೇಜರ್‌ಗಂಜ್‌ನಲ್ಲಿ ಇರುವ ಭಾರತೀಯ ಕರಾವಳಿ ಕಾವಲು ಪಡೆ (Indian Coast Guard) ಅಡಿಕೆ ಕಳ್ಳಸಾಗಣೆಯಲ್ಲಿ ತೊಡಗಿದ್ದ ಮೀನುಗಾರಿಕಾ ದೋಣಿಯನ್ನು ವಶಕ್ಕೆ ಪಡೆದಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.  ಬಾಂಗ್ಲಾದೇಶದಿಂದ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.  ಕರಾವಳಿ ಕಾವಲು ಪಡೆಯು ಸುಮಾರು 50 ಕೆಜಿ ತೂಕದ 52 ಅಡಿಕೆ ಚೀಲ ಅಂದರೆ ಸುಮಾರು  2,600 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ಶಂಕಿತ ದೋಣಿಯನ್ನು ತಪಾಸಣೆ ಮಾಡಿದ ವೇಳೆ, ಅದರಲ್ಲಿದ್ದ ಸಿಬ್ಬಂದಿಯ ಬಳಿ ಸರಿಯಾದ ದಾಖಲೆಗಳು ಇಲ್ಲದೆ ಇರುವುದು ಪತ್ತೆಯಾಗಿದೆ. ಈ ದೋಣಿಯನ್ನು ಮುಂದಿನ ತನಿಖೆಗಾಗಿ ಸಂಬಂಧಿತ ಕಸ್ಟಮ್ಸ್ ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಒಪ್ಪಿಸಲಾಗಿದೆ. ಕರಾವಳಿ ಪ್ರದೇಶದಲ್ಲಿ ಅಕ್ರಮ ಸಾಗಾಟ ತಡೆಯಲು ಕರಾವಳಿ ಕಾವಲು ಪಡೆ ನಿಗಾವನ್ನು ಇನ್ನಷ್ಟು ಬಿಗಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror