ಡಾಲರ್‌ ಎದುರು ಮತ್ತೆ ಕುಸಿತಗೊಂಡ ರೂಪಾಯಿ ಮೌಲ್ಯ | ಅತ್ಯಂತ ಕನಿಷ್ಟ ಮಟ್ಟಕ್ಕೆ ಕುಸಿತ ಕಂಡ ರೂಪಾಯಿ |

September 23, 2022
10:26 AM

ಡಾಲರ್ ಎದುರು ರೂಪಾಯಿ ಮೌಲ್ಯ 80.50 ರೂಪಾಯಿಯ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದು ಸಾರ್ವಕಾಲಿಕ ಪತನವಾಗಿದ್ದು,ಎರಡು ದಶಕಗಳಲ್ಲಿಯೇ ಅತ್ಯಂತ ಕನಿಷ್ಟ ಕುಸಿತವಾಗಿದೆ.   

Advertisement

ಸತತ 2 ದಿನಗಳಿಂದ ಭಾರತೀಯ ಷೇರುಮಾರುಕಟ್ಟೆಯೂ ಕುಸಿತ ಕಂಡಿದೆ. ಇದರ ಬೆನ್ನಲ್ಲೇ ರೂಪಾಯಿ ಮೌಲ್ಯ ಕೂಡ  ಕುಸಿತ ಕಾಣುತ್ತಿದೆ. ಗುರುವಾರ ರೂಪಾಯಿ ಮೌಲ್ಯದಲ್ಲಿ 51 ಪೈಸೆ ಕುಸಿತವಾಗಿದ್ದು, ಡಾಲರ್‌ ಎದುರು ರೂಪಾಯಿ ಮೌಲ್ಯ 80.47 ಕ್ಕೆ ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ಕುಸಿದಿದೆ.  ಬುಧವಾರ ಡಾಲರ್ ಎದುರು ರೂಪಾಯಿ 22 ಪೈಸೆ ಕುಸಿತ ಕಂಡು 79.96ಕ್ಕೆ ತಲುಪಿತ್ತು.

ಅಮೇರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರವನ್ನು ಮತ್ತೆ 75 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆಯಿತು. ಇದು ಹೆಚ್ಚುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಳಕ್ಕೆ ಮುಂದಾಗಿದ್ದಕ್ಕೆ ಮಾರುಕಟ್ಟೆ ನೀಡಿರುವ ಪ್ರತಿಕ್ರಿಯೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ರೂಪಾಯಿ ಮೌಲ್ಯ ಕುಸಿಯುವುದನ್ನು ತಡೆ ಹಿಡಿಯಲು ರಿಸರ್ವ್‌ ಬ್ಯಾಂಕ್‌  ವಿದೇಶಿ ವಿನಿಮಯವನ್ನು ಖರ್ಚು ಮಾಡುತ್ತಲೇ ಇದೆ. ಫೆಬ್ರವರಿಯಲ್ಲಿ ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಿದಾಗಿನಿಂದ ಆರ್‌ಬಿಐ 80 ಬಿಲಿಯನ್‌ ಡಾಲರ್‌ ಮೌಲ್ಯದ ವಿದೇಶಿ ವಿನಿಮಯವನ್ನು ಖರ್ಚು ಮಾಡಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group