ಡಾಲರ್ ಎದುರು ರೂಪಾಯಿ ಮೌಲ್ಯ 80.50 ರೂಪಾಯಿಯ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದು ಸಾರ್ವಕಾಲಿಕ ಪತನವಾಗಿದ್ದು,ಎರಡು ದಶಕಗಳಲ್ಲಿಯೇ ಅತ್ಯಂತ ಕನಿಷ್ಟ ಕುಸಿತವಾಗಿದೆ.
ಸತತ 2 ದಿನಗಳಿಂದ ಭಾರತೀಯ ಷೇರುಮಾರುಕಟ್ಟೆಯೂ ಕುಸಿತ ಕಂಡಿದೆ. ಇದರ ಬೆನ್ನಲ್ಲೇ ರೂಪಾಯಿ ಮೌಲ್ಯ ಕೂಡ ಕುಸಿತ ಕಾಣುತ್ತಿದೆ. ಗುರುವಾರ ರೂಪಾಯಿ ಮೌಲ್ಯದಲ್ಲಿ 51 ಪೈಸೆ ಕುಸಿತವಾಗಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ 80.47 ಕ್ಕೆ ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ಕುಸಿದಿದೆ. ಬುಧವಾರ ಡಾಲರ್ ಎದುರು ರೂಪಾಯಿ 22 ಪೈಸೆ ಕುಸಿತ ಕಂಡು 79.96ಕ್ಕೆ ತಲುಪಿತ್ತು.
ಅಮೇರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರವನ್ನು ಮತ್ತೆ 75 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆಯಿತು. ಇದು ಹೆಚ್ಚುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಳಕ್ಕೆ ಮುಂದಾಗಿದ್ದಕ್ಕೆ ಮಾರುಕಟ್ಟೆ ನೀಡಿರುವ ಪ್ರತಿಕ್ರಿಯೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ರೂಪಾಯಿ ಮೌಲ್ಯ ಕುಸಿಯುವುದನ್ನು ತಡೆ ಹಿಡಿಯಲು ರಿಸರ್ವ್ ಬ್ಯಾಂಕ್ ವಿದೇಶಿ ವಿನಿಮಯವನ್ನು ಖರ್ಚು ಮಾಡುತ್ತಲೇ ಇದೆ. ಫೆಬ್ರವರಿಯಲ್ಲಿ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಿದಾಗಿನಿಂದ ಆರ್‌ಬಿಐ 80 ಬಿಲಿಯನ್ ಡಾಲರ್ ಮೌಲ್ಯದ ವಿದೇಶಿ ವಿನಿಮಯವನ್ನು ಖರ್ಚು ಮಾಡಿದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…