Advertisement
MIRROR FOCUS

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

Share

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಭಾರತೀಯ ಟಯರ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಉದ್ಯಮ ಸಂಘಟನೆ ಸರ್ಕಾರದ ನೆರವು ಕೋರಿ ಮನವಿ ಸಲ್ಲಿಸಿದೆ.

ಯುದ್ಧದಿಂದ ಟಯರ್ ರಫ್ತು ವ್ಯತ್ಯಯಗೊಳ್ಳುವ ಸಾಧ್ಯತೆ, ಕಚ್ಚಾ ವಸ್ತುಗಳ ವೆಚ್ಚ ಏರಿಕೆ ಹಾಗೂ ಲಾಜಿಸ್ಟಿಕ್ಸ್ ಸವಾಲುಗಳು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ ಎಂದು ಉದ್ಯಮ ಸಂಘಟನೆ ತಿಳಿಸಿದೆ.

ಭಾರತವು ಪ್ರತಿವರ್ಷ ಸುಮಾರು 250–260 ಮಿಲಿಯನ್ ಡಾಲರ್ ಮೌಲ್ಯದ ಟಯರ್ ಗಳನ್ನು ಪಶ್ಚಿಮ ಏಷ್ಯಾಕ್ಕೆ ರಫ್ತು ಮಾಡುತ್ತದೆ, ಈ ಮಾರುಕಟ್ಟೆ ಯುದ್ಧದಿಂದ ಹೊಡೆತ ಅನುಭವಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ನೈಸರ್ಗಿಕ ಅನಿಲ ಮತ್ತು LPG ಮುಂತಾದ ಇಂಧನಗಳು ಟಯರ್ ಉತ್ಪಾದನೆಯಲ್ಲಿ ಪ್ರಮುಖವಾಗಿರುವುದರಿಂದ ಟಯರ್ ಉದ್ಯಮ ಹಾಗೂ ಅದರ ಸರಬರಾಜು ಸರಪಳಿಯನ್ನು ಅತ್ಯಾವಶ್ಯಕ ಕ್ಷೇತ್ರ ಎಂದು ವರ್ಗೀಕರಿಸುವಂತೆ ಸರ್ಕಾರವನ್ನು ಉದ್ಯಮ ಸಂಘಟನೆ ಮನವಿ ಮಾಡಿದೆ.

ಕ್ರೂಡ್ ಆಯಿಲ್ ಬೆಲೆ ಅಸ್ಥಿರತೆಯೂ ಟಯರ್ ಉತ್ಪಾದನೆಗೆ ದೊಡ್ಡ ಹೊಡೆತ ನೀಡಬಹುದು. ಏಕೆಂದರೆ ಟಯರ್ ಉತ್ಪಾದನೆ ವೆಚ್ಚದಲ್ಲಿ 60–70% ವರೆಗೆ ಕ್ರೂಡ್ ಆಯಿಲ್ ಉತ್ಪನ್ನಗಳ ಪಾಲು ಇದೆ, ಇದರಿಂದ ವೆಚ್ಚ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ಹಾರ್ಮುಜ್ ಜಲಸಂಧಿ ಹಾಗೂ ಸೂಯೆಝ್ ಕಾಲುವೆ ಮಾರ್ಗಗಳಲ್ಲಿ ಉಂಟಾಗುವ ವ್ಯತ್ಯಯಗಳು ಯುರೋಪ್, ಅಮೆರಿಕಾ ಮತ್ತು ಆಫ್ರಿಕಾ ಮಾರುಕಟ್ಟೆಗಳಿಗೂ ರಫ್ತಿಗೆ ತೊಂದರೆ ಉಂಟುಮಾಡಬಹುದು ಎಂದು ಉದ್ಯಮ ಎಚ್ಚರಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India’s tyre industry has sought government support amid the ongoing West Asia conflict, citing risks of export disruptions, rising crude-linked input costs and logistical challenges. The industry has urged policy measures and essential sector classification to ensure uninterrupted fuel supply and maintain competitiveness.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

11 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

15 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago