ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ಪರಿಹಾರ | ಭಾರತ ನೇತೃತ್ವ ವಹಿಸಬೇಕು ಎಂದು ಬಿಲ್ಗೇಟ್ಸ್ ಕರೆ |

March 2, 2023
6:19 PM

ಸದ್ಯ ನಮ್ಮ ದೇಶ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದು ಹವಾಮಾನ ವೈಪರಿತ್ಯ. ಇಡೀ ಪ್ರಪಂಚವೇ  ಕುದಿಯುತ್ತಿದೆ. ಭಾರತ ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ ಆದರೂ ಸಮಸ್ಯೆ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ. ಈ ನಡುವೆಯೇ ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ನೇತೃತ್ವ ವಹಿಸಬೇಕು ಎಂದು ಮಿಲೇನಿಯರ್‌, ಮೈಕ್ರೋಸಾಫ್ಟ್‌ನ ಸಹಸಂಸ್ಥಾಪಕ ಬಿಲ್‌ಗೇಟ್ಸ್ ಕರೆ ನೀಡಿದ್ದಾರೆ. 

ಹವಾಮಾನ ವೈಪರೀತ್ಯ ಸಮಸ್ಯೆಗೆ  ವೈಜ್ಞಾನಿಕ ಆವಿಷ್ಕಾರದ ಮೂಲಕ ಪರಿಹಾರ ಕಂಡುಕೊಳ್ಳಬೇಕು. ಅದಕ್ಕೆ ಭಾರತ ನೇತೃತ್ವ ವಹಿಸಬೇಕು ಎಂದು ಮೈಕ್ರೋಸಾಫ್ಟ್‌ನ ಸಹಸಂಸ್ಥಾಪಕ ಬಿಲ್‌ಗೇಟ್ಸ್ ಕರೆ ನೀಡಿದ್ದಾರೆ. 

ತಮ್ಮ ಬ್ಲಾಗ್‍ನಲ್ಲಿ ಅವರು, ಜಗತ್ತಿನಲ್ಲಿ ತಲೆದೂರಿರುವ ಜಾಗತಿಕ ಸಮಸ್ಯೆಯನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಭಾರತದ ಸಾಧನೆ ಉತ್ತಮವಾಗಿದೆ ಎಂದು ಶ್ಲಾಘಿಸಿದ್ದಾರೆ.  ಅಷ್ಟೇ ಅಲ್ಲದೆ ಭಾರತವು ನನಗೆ ಮುಂದಿನ  ಭವಿಷ್ಯದ ಹೊಸ ಭರವಸೆಯನ್ನು ನೀಡುತ್ತದೆ.

ಭಾರತ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಲು ಹೊರಟಿದೆ, ಇನ್ನೂ, ಭಾರತವು ದೊಡ್ಡ ಸವಾಲುಗಳನ್ನು ನಿಭಾಯಿಸಬಲ್ಲದು ಎಂಬುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

ಇದು ಪ್ರತಿ ವರ್ಷವೂ ಪರಿಸರ ಸ್ವಲ್ಪಮಟ್ಟಿಗೆ ಹದಗೆಡುತ್ತಲೇ ಹೋಗುತ್ತದೆ,  ಇದು ಸರಿಪಡಿಸಲು ಕಷ್ಟಕರವಾದ ವಿಷಯಗಳಲ್ಲಿ ಒಂದಾಗಿದೆ. ಏಕೆಂದರೆ ಜಗತ್ತಿನಾದ್ಯಂತ ಆಧುನಿಕ ಆರ್ಥಿಕತೆಗಳು ಶಕ್ತಿಯ ತೀವ್ರತೆಯನ್ನು ಆಧರಿಸಿವೆ ಮತ್ತು ಈ ಶಕ್ತಿಯ 80 ಪ್ರತಿಶತದಷ್ಟು ಹೈಡ್ರೋಕಾರ್ಬನ್‌ಗಳನ್ನು ಸುಡುತ್ತದೆ. ಹೀಗಾಗಿ ವಾತಾವರಣದ ಉಷ್ಣತೆಯಲ್ಲಿ ಏರುಪೇರು ಇರುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror