#AyushmanBharat | ಭಾರತದ ಆಯುಷ್ಮಾನ್ ಯೋಜನೆ ಉತ್ತಮ ಯೋಜನೆ | ಯೋಜನೆಯನ್ನು ಶ್ಲಾಘಿಸಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

August 19, 2023
8:08 PM
ಯುನಿವರ್ಸಲ್ ಹೆಲ್ತ್ ಕವರೇಜ್ ಮತ್ತು ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯನ್ನಾಗಿ ಮುಂದುವರಿಸುವಲಿ ಭಾರತವು ಇಟ್ಟ ಹೆಜ್ಜೆಗಳಿಗಾಗಿ ನಾನು ಶ್ಲಾಘಿಸುತ್ತೇನೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಮೋದಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ಸಂಬಂಧಿತ ಕೆಲಸಗಳಿಗೆ ಮಹತ್ವ ಆಯುಷ್ಮಾನ್‌ ಭಾರತ್ #AyushmanBharat ನೀಡುತ್ತಿರುವ ಭಾರತದ ಯೋಜನೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ# WHO ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಶ್ಲಾಘಿಸಿದ್ದಾರೆ.

Advertisement
Advertisement

ಗುಜರಾತಿನ ಗಾಂಧಿನಗರದಲ್ಲಿ ನಡೆಯುತ್ತಿರುವ ಜಿ20 ಆರೋಗ್ಯ ಸಚಿವರ ಸಭೆಯ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಡಾ ಟೆಡ್ರೊಸ್, ತಮ್ಮ ಭಾಷಣದ ಆರಂಭದಲ್ಲಿ, ಜಿ 20 ಶೃಂಗಸಭೆಯನ್ನು ಆಯೋಜಿಸುವಲ್ಲಿ ಭಾರತದ ಆತಿಥ್ಯ ಮತ್ತು ದೂರದೃಷ್ಟಿಯ ನಾಯಕತ್ವಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು. ಜೊತೆಗೆ, ಯುನಿವರ್ಸಲ್ ಹೆಲ್ತ್ ಕವರೇಜ್ ಮತ್ತು ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯನ್ನಾಗಿ ಮುಂದುವರಿಸುವಲಿ ಭಾರತವು ಇಟ್ಟ ಹೆಜ್ಜೆಗಳಿಗಾಗಿ ನಾನು ಶ್ಲಾಘಿಸುತ್ತೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಭಾರತದಲ್ಲಿನ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ನೀಡುತ್ತಿರುವ ಸೇವೆಯ ಬಗ್ಗೆಯೂ ತಮ್ಮ ಭಾಷಣದಲ್ಲಿ ಕೊಂಡಾಡಿದ ಡಾ ಟೆಡ್ರೊಸ್, ನಾನು ಇಲ್ಲಿ ಗಾಂಧಿನಗರದಲ್ಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಕ್ಕೆ ಭೇಟಿ ನೀಡಿ ಶ್ಲಾಘಿಸಿದರಲ್ಲದೇ, ಗ್ಲೋಬಲ್ ಡಿಜಿಟಲ್ ಹೆಲ್ತ್ ಇನಿಶಿಯೇಟಿವ್‌ಗಾಗಿ ಭಾರತದ G20 ಪ್ರೆಸಿಡೆನ್ಸಿಗೆ ಧನ್ಯವಾದ ಅರ್ಪಿಸಿದರು.

ಇನ್ನು, ಸ್ಥಳೀಯವಾಗಿ ಪ್ರಿಸ್ಕ್ರಿಪ್ಷನ್‌ಗಳು ಮತ್ತು ಚಿಕಿತ್ಸೆಯನ್ನು ಒದಗಿಸುವ ಟೆಲಿಮೆಡಿಸಿನ್ ಸೇವೆಗಳನ್ನು ನಾನು ಇಲ್ಲಿ ಶ್ಲಾಘಿಸುತ್ತೇನೆ. ಇದು ಆರೋಗ್ಯವನ್ನು ಉತ್ತಮ ಗುಣಮಟ್ಟಕ್ಕೆ ಪರಿವರ್ತಿಸುವ ಅತ್ಯುತ್ತಮ ಉದಾಹರಣೆಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಜಿ20 ಆರೋಗ್ಯ ಸಚಿವರ ಸಭೆ ಮತ್ತು ಸೈಡ್ ಈವೆಂಟ್‌ನಲ್ಲಿ ವಿವಿಧ ದೇಶಗಳ 70 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಜಿ20 ಇಂಡಿಯಾ ಪ್ರೆಸಿಡೆನ್ಸಿ ಅಡಿಯಲ್ಲಿ ಮೂರು ದಿನಗಳ ಜಿ20 ಆರೋಗ್ಯ ಮಂತ್ರಿಗಳ ಸಭೆಯು ಇಂದು ಮುಕ್ತಾಯಗೊಂಡಿದೆ. ಭಾರತವು ಡಿಸೆಂಬರ್ 1, 2022 ರಂದು G20 ನ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ. ಪ್ರಸ್ತುತ ಇಂಡೋನೇಷ್ಯಾ, ಭಾರತ ಮತ್ತು ಬ್ರೆಜಿಲ್ ಅನ್ನು ಒಳಗೊಂಡಿರುವ G20 Troika ನ ಭಾಗವಾಗಿದೆ.

Advertisement

Source : Digital Media

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!
April 29, 2024
3:30 PM
by: The Rural Mirror ಸುದ್ದಿಜಾಲ
ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ
April 29, 2024
2:51 PM
by: The Rural Mirror ಸುದ್ದಿಜಾಲ
ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?
April 29, 2024
2:40 PM
by: The Rural Mirror ಸುದ್ದಿಜಾಲ
ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!
April 29, 2024
1:59 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror