ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

June 19, 2025
10:48 PM

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ 40 ರಷ್ಟು ವೃದ್ಧಿಯನ್ನು ಸಾಧಿಸಿದೆ ಎಂದು ಕಾಫಿಬೋರ್ಡ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಕೂರ್ಮಾರಾವ್ ತಿಳಿಸಿದ್ದಾರೆ.

ಕಾಫಿ ಮಂಡಳಿಗೆ ನವದೆಹಲಿಯ ಮಾಧ್ಯಮ ತಂಡ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಭಾರತದ ಶೇಕಡ 46 ರಷ್ಟು ಪ್ರತಿಶತ ಕಾಫಿ  ಯುರೋಪಿಯನ್ ಒಕ್ಕೂಟದ ರಾಷ್ಟ್ರಗಳಿಗೆ ರಫ್ತಾಗುತ್ತಿದೆ. ಇದರ ಜೊತೆಗೆ ಭಾರತದ ಕಾಫಿಯನ್ನು ಬ್ರಾಂಡ್ ಇಂಡಿಯಾ ಕಾಫಿ ಮೂಲಕ ಪ್ರಚುರಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ದೇಶದಲ್ಲಿ ಸುಮಾರು 4.90 ಲಕ್ಷ ಹೆಕ್ಟೇರ್‌ನಲ್ಲಿ ಕಾಫಿ ಬೆಳೆಯಲಾಗುತ್ತಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಾದ ಕೊರಿಯಾ, ಜಪಾನ್‌ನಲ್ಲಿ ಭಾರತೀಯ ಕಾಫಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಆಂಧ್ರ, ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳಯುವ ಬಗ್ಗೆ ಪ್ರಯೋಗ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಮಾಧ್ಯಮ ತಂಡ ಕಾಫಿ ಸಂಸ್ಕರಣಾ ಘಟಕ, ಪ್ರಯೋಗಾಲಯ ಹಾಗೂ ಸಂಶೋಧನಾ ಕೇಂದ್ರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror